ಧರ್ಮಸ್ಥಳ ಕೇಸ್’ಗೆ ಟ್ವಿಸ್ಟ್: ಪಾಯಿಂಟ್-1ರಲ್ಲಿ ಕೆಂಪು ಬ್ಲೌಸ್, ಪ್ಯಾನ್, ಡೆಬಿಟ್ ಕಾರ್ಡ್ ಪತ್ತೆ..!

ಮಂಗಳೂರು: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ದೂರುದಾರ ಗುರುತಿಸಿದ 13 ಸ್ಥಳಗಳಲ್ಲಿ ಒಂದೊಂದೆ ಜಾಗಗಳನ್ನು ಅಗೆದು ಶೋಧ ನಡೆಸಲಾಗ್ತಿದೆ. ಮೊದಲ ದಿನದ ಕಾರ್ಯಾಚರಣೆಯಲ್ಲಿ 1ನೇ ಪಾಯಿಂಟ್ನಲ್ಲಿ ಯಾವುದೇ ಕಳೇಬರ ಪತ್ತೆಯಾಗಿರಲಿಲ್ಲ. ಇಂದು ಎರಡನೇ ಪಾಯಿಂಟ್ ಹಾಗೂ ಮೂರನೇ ಪಾಯಿಂಟ್ಗಳನ್ನು ಅಗೆಯಲಾಯಿತು. ಆದ್ರೆ, ಈ ಇಂದು ಕೂಡ ಯಾವುದೇ ಕಳೇಬರ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಆದ್ರೆ ಪಾಯಿಂಟ್ ನಂಬರ್ .1ರಲ್ಲಿ ಅಗೆತದ ವೇಳೆ ಸುಮಾರು 2.5 ಅಡಿಗಳ ಆಳದಲ್ಲಿ ಕೆಂಪು ಬಟ್ಟೆ, ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಅನನ್ಯಾ ಭಟ್ ಪರ ವಕೀಲರಾದ ಮಂಜುನಾಥ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಪತ್ತೆಯಾದ ವಸ್ತುಗಳ ಕುರಿತು ವಿವರ ನೀಡಿದ್ದಾರೆ.
“ನಾವು ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ, ಪಾಯಿಂಟ್ ನಂಬರ್ ನಂ.1ರಲ್ಲಿ ಶೋಧಕಾರ್ಯದ ವೇಳೆ 2.5 ಅಡಿಗಳ ಆಳದಲ್ಲಿ ಕೆಂಪು ಬಟ್ಟೆಯೊಂದರ ಜೊತೆಗೆ ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ಪತ್ತೆಯಾಗಿದೆ” ಎಂದು ಅವರು ತಿಳಿಸಿದ್ದಾರೆ.
ಪತ್ತೆಯಾದ ಎಟಿಎಂ ಕಾರ್ಡ್ಗಳಲ್ಲಿ ಒಂದರಲ್ಲಿ ಪುರುಷನ ಹೆಸರು, ಇನ್ನೊಂದರಲ್ಲಿ ಲಕ್ಷ್ಮಿ ಎಂಬ ಮಹಿಳೆಯ ಹೆಸರು ಇದೆ ಎಂದು ಉಲ್ಲೇಖಿಸಲಾಗಿದೆ. ಈ ವಸ್ತುಗಳು ತೀವ್ರ ಶಂಕೆ ಮೂಡಿಸಿದ್ದರಿಂದ ತನಿಖಾಧಿಕಾರಿ ಡಿಐಜಿ ಅನುಚೇತ್ ಸ್ಥಳಕ್ಕೆ ಭೇಟಿ ನೀಡಿದ್ದು, ಎಸ್ಐಟಿಯ ಕ್ರಮಗಳು ಶ್ಲಾಘನೀಯವಾಗಿವೆ ಎಂದು ವಕೀಲರು ಅಭಿಪ್ರಾಯಪಟ್ಟಿದ್ದಾರೆ.
ಎಸ್ಐಟಿಯ ವೃತ್ತಿಪರ ಕಾರ್ಯವೈಖರಿ ಮತ್ತು ಸಮಗ್ರ ಶೋಧನಾ ಕಾರ್ಯವನ್ನು ವಕೀಲ ಮಂಜುನಾಥ್ ಶ್ಲಾಘಿಸಿದ್ದು, 10 ಅಡಿಗಳ ಆಳವರೆಗೆ ಅಗೆದು ಪ್ರಾಮಾಣಿಕ ಪರಿಶೋಧನೆ ನಡೆಸಿದ ಎಸ್ಐಟಿ ತಂಡದ ನಿರ್ಧಾರವು ಯಾವುದೇ ಸಣ್ಣದಾದರೂ ಸಾಕ್ಷ್ಯವನ್ನೂ ಕಡೆಗಣಿಸದ ಎಚ್ಚರಿಕೆಯನ್ನು ತೋರಿಸಿದೆ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






