ಧರ್ಮಸ್ಥಳ ಬುರುಡೆ ಪ್ರಕರಣ: ಮಂತ್ರವಾದಿಗಳ ಬೆನ್ನತ್ತಿದ SIT ಅಧಿಕಾರಿಗಳು!
ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ‘ಬುರುಡೆ’ ಪ್ರಕರಣದ ತನಿಖೆ ಚುರುಕುಗೊಂಡಿದೆ. ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ತನಿಖಾ ಕಚೇರಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು, ಆರೋಪದ ಮೇರೆಗೆ ಬಂಗ್ಲೆಗುಡ್ಡದಲ್ಲಿ ಶೋಧ ಕಾರ್ಯ ನಡೆಯುವ ಸಾಧ್ಯತೆ ಹೆಚ್ಚಿದೆ.
ಸೌಜನ್ಯ ಮಾವ ವಿಠ್ಠಲಗೌಡ ಬಂಗ್ಲೆಗುಡ್ಡದಿಂದ ಬುರುಡೆ ತಂದಿದ್ದಾಗಿ ಹೇಳಿಕೆ ನೀಡಿದ್ದಾರೆ. ಬಂಗ್ಲೆಗುಡ್ಡದಲ್ಲಿ ವಾಮಾಚಾರ ನಡೆದಿದ್ದು, ಹೆಣಗಳ ರಾಶಿಯೂ ಇದೆ ಎಂಬ ವಿಡಿಯೋ ಮೂಲಕ ವಿಠ್ಠಲಗೌಡ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಸುತ್ತಮುತ್ತ ವಾಮಾಚಾರ ಮಾಡುವವರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಮಂಗಳವಾರ ಬಂಗ್ಲೆಗುಡ್ಡದಲ್ಲಿ ಮರಗಳ ಸರ್ವೆ, ವಯಸ್ಸಿನ ವರದಿ ಹಾಗೂ ಶೋಧ ಕಾರ್ಯ ನಡೆಯುವ ನಿರೀಕ್ಷೆ ಇದೆ. ವಿಠ್ಠಲಗೌಡ ತೋರಿಸಿದ ಪಾಯಿಂಟ್ನಲ್ಲಿ ಉತ್ಖನನ ಕಾರ್ಯ ಕೂಡ ನಡೆಯಬಹುದು. ಧರ್ಮಸ್ಥಳ ಹಾಗೂ ಬೆಳ್ತಂಗಡಿ ಪೊಲೀಸರು ಎಸ್ಐಟಿ ಮಾರ್ಗದರ್ಶನದಲ್ಲಿ ಭದ್ರತೆ ಒದಗಿಸಿದ್ದು, ಶೋಧ ಕಾರ್ಯಾಚರಣೆಗೆ ಸಿದ್ಧತೆ ನಡೆಯುತ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?