ನಟಿ ಅನುಷ್ಕಾ ಶೆಟ್ಟಿಯ “Ghaati” Movie ಜೊತೆ ಕೈಜೋಡಿಸಿದ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್!

ಆಗಸ್ಟ್ 26, 2025 - 20:02
 0  24
ನಟಿ ಅನುಷ್ಕಾ ಶೆಟ್ಟಿಯ “Ghaati” Movie ಜೊತೆ ಕೈಜೋಡಿಸಿದ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್!

ಖ್ಯಾತ ನಟ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ‘ಕೊತ್ತಲವಾಡಿ’ ಚಿತ್ರವನ್ನು ನಿರ್ಮಿಸಿ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದರು. ಈಗ ಅವರು PA ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಚಿತ್ರ ವಿತರಣಾ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಪುಷ್ಪಾ ಅವರ ವಿತರಕಿಯಾಗಿ ಮೊದಲ ಹೆಜ್ಜೆ ಮಹಿಳಾ ಪ್ರಧಾನ ಚಿತ್ರದ ಮೂಲಕವಾಗಿದೆ.

ಅನುಷ್ಕಾ ಶೆಟ್ಟಿ ಅಭಿನಯದ ಘಾಟಿ’  ಚಿತ್ರವನ್ನು ಅವರು ಕರ್ನಾಟಕಾದ್ಯಂತ ಹಂಚಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ಪುಷ್ಪಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಫಾಟಿ ಚಿತ್ರದ ಮೂಲಕ ಸಿನಿಮಾ ವಿತರಣೆ ಆರಂಭಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು ಪಿಎ ಪ್ರೊಡಕ್ಷನ್ಸ್ ಮೂಲಕ ವಿತರಣೆ ಮಾಡುತ್ತೇವೆ’ ಎಂದು ಪುಷ್ಪಾ ಹೇಳಿದ್ದಾರೆ. ಅವರು ಹೊಸ ಹೆಜ್ಜೆ ಇಟ್ಟಿದ್ದಕ್ಕೆ ಎಲ್ಲರೂ ಶುಭಕೋರುತ್ತಿದ್ದಾರೆ.

‘ಸಿನಿಮಾ ನಿರ್ಮಾಣಕ್ಕೆ ಬಂದಾಗ ಅನೇಕರು ಸಾಕಷ್ಟು ಪ್ರೀತಿ ತೋರಿಸಿದ್ದೀರಿ. ಅದೇ ಪ್ರೀತಿ ವಿತರಿಕಿಯಾದಾಗಲೂ ಇರಲಿ. ನಿಮ್ಮಲ್ಲೆ ಪ್ರೋತ್ಸಾಹ ಬೇಕು’ ಎಂದು ಪುಷ್ಪಾ ಅವರು ಹೇಳಿದ್ದಾರೆ. ಅವರು ಮೊದಲ ಹಂಚಿಕೆಯಲ್ಲಿ ಯಶಸ್ಸು ಕಾಣುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಪುಷ್ಪಾ ಅರುಣ್ ಕುಮಾರ್ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರು ಸಂದರ್ಶನಗಳನ್ನು ನೀಡಿ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದಾರೆ. ಈಗ ಅವರು ಸಿನಿಮಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಸಿನಿಮಾ ಹಂಚಿಕೆ ಕೂಡ ಮಾಡುತ್ತಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow