ನಟಿ ಸಂಜನಾ ಗಲ್ರಾನಿಗೆ ಶಾಕ್ ನೀಡಲು ಮುಂದಾದ ಸಿಸಿಬಿ ಪೊಲೀಸರು..! ಯಾಕೆ ಗೊತ್ತಾ..?

ಫೆಬ್ರವರಿ 11, 2025 - 16:15
 0  9
ನಟಿ ಸಂಜನಾ ಗಲ್ರಾನಿಗೆ ಶಾಕ್ ನೀಡಲು ಮುಂದಾದ ಸಿಸಿಬಿ ಪೊಲೀಸರು..! ಯಾಕೆ ಗೊತ್ತಾ..?

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ವಿಚಾರ ತುಂಬಾನೇ ಸುದ್ದಿ ಮಾಡಿತ್ತು. ಡ್ರಗ್​ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿಯನ್ನೂ ಕೂಡ ಬಂಧೀಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ನಟಿ ಸಂಜನಾ ಗಲ್ರಾನಿಗೆ ಸಿಸಿಬಿ ಪೊಲೀಸರು ಶಾಕ್ ನೀಡಲು ಮುಂದಾಗಿದ್ದು. ಮಾಧಕ ವಸ್ತು ಸೇವನೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ , ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. 

 ಡ್ರಗ್ ಕೇಸ್​ನಲ್ಲಿ ಕೆಲ ವರ್ಷಗಳ ಹಿಂದೆ ಸಂಜನಾ ಅರೆಸ್ಟ್ ಆಗಿದ್ದರು. ಕೆಲ ಸಮಯ ಜೈಲಿನಲ್ಲಿ ಇದ್ದು ಬಂದ ಅವರು, ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಆದರೆ, ಇತ್ತೀಚೆಗೆ ಹೈಕೋರ್ಟ್​​ನಲ್ಲಿ ಪ್ರಕರಣ ವಜಾ ಗೊಂಡಿತ್ತು. ಹೀಗಾಗಿ ಸಂಜನಾ ಗಲ್ರಾನಿ ವಿರುದ್ಧ ಮೇಲ್ಮನವಿ ಸಲ್ಲಿಕೆ ಮಾಡಲು ತಯಾರಿ ನಡೆದಿದೆ. ಇದರಿಂದ ಸಂಜನಾಗೆ ಮತ್ತೆ ಭೀತಿ ಶುರವಾಗಿದೆ.

‘ಈಗಾಗಲೇ ಸರ್ಕಾರದ ಮಟ್ಟದಲ್ಲಿ ಸಭೆ ನಡೆಸಿ ಅರ್ಜಿ ತಯಾರಿ ಮಾಡಲಾಗಿದೆ. ಪ್ರಾಸಿಕ್ಯೂಷನ್ ಅನುಮತಿ ಬರುತ್ತಾ ಇದ್ದಂತೆ ಅರ್ಜಿ ಸಲ್ಲಿಕೆ ಆಗಲಿದೆ’ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಹೇಳಿಕೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಂಜನಾ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ನೋಡಬೇಕಿದೆ.

ನಟಿ ಸಂಜನಾ ಗಲ್ರಾನಿ ಅವರು ಕನ್ನಡದ ಗಂಡ - ಹೆಂಡತಿ ಚಿತ್ರದ ಮೂಲಕ ಸ್ಯಾಂಡಲ್​ ವುಡ್​ಗೆ ಪಾದಾರ್ಪಣೆ ಮಾಡಿದರು. ಇದಾದ ನಂತರ ಅನೇಕ ಚಿತ್ರಗಳಲ್ಲಿ ಸಂಜನಾ ಬಣ್ಣ ಹಚ್ಚಿದ್ದಾರೆ. ಚಿತ್ರಗಳಲ್ಲಿ ಅಷ್ಟೇ ಅಲ್ಲದೇ ರಿಯಾಲಿಟಿ ಶೋಗಳಲ್ಲೂ ನಟಿ ಸಂಜನಾ ಗಲ್ರಾನಿ ಅವರು ಕಾಣಿಸಿಕೊಂಡಿದ್ದರು. ಬಿಗ್ ಬಾಸ್ ಕನ್ನಡ, ಮುಜ್ಞೆ ಶಾದಿ ಕರೋಗೆ? ಎಂಬ ರಿಯಾಲಿಟಿ ಶೋಗಳಲ್ಲೂ ನಟಿ ಸಂಜನಾ ಅವರು ಭಾಗವಹಿಸಿದ್ದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow