ನಟ ದರ್ಶನ್ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ನಟಿ ರಮ್ಯಾ ರಿಯಾಕ್ಷನ್ ಏನು?
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರ ಬೆನ್ನಲ್ಲೇ ನಟ ದರ್ಶನ್ ಅವರನ್ನು ಇಂದೇ ಬಂಧಿಸುವ ಸಾಧ್ಯತೆ ಇದೆ.
ಈ ಕುರಿತು ನಟಿ ರಮ್ಯಾ ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. “ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಬಲವಾದ ಸಂದೇಶ ನೀಡುತ್ತದೆ” ಎಂದು ಅವರು ಬರೆದಿದ್ದಾರೆ.
ಅವರು ಮುಂದುವರೆದು, “ನ್ಯಾಯಯುತವಾಗಿ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಳ್ಳಿ. ಇದು ದೀರ್ಘ ಮತ್ತು ಕಠಿಣವಾದ ಪ್ರಯಾಣ, ಆದರೆ ಸುರಂಗದ ಕೊನೆಯಲ್ಲಿ ಬೆಳಕು ಇದೆ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ಸಿಕ್ಕೇ ಸಿಗುತ್ತದೆ. ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ” ಎಂದು ಸಂದೇಶ ನೀಡಿದ್ದಾರೆ.
ಹಿಂದಿನ ದಿನಗಳಲ್ಲಿ ರಮ್ಯಾ, “ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇದೆ” ಎಂದು ಹೇಳಿದ ಹಿನ್ನೆಲೆಯಲ್ಲಿ, ದರ್ಶನ್ ಅಭಿಮಾನಿಗಳು ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರು. ಇದರಿಂದ ಅಸಮಾಧಾನಗೊಂಡ ರಮ್ಯಾ ಪೊಲೀಸರಿಗೆ ದೂರು ಸಲ್ಲಿಸಿದ್ದರು, ನಂತರ ಕೆಲವರನ್ನು ಬಂಧಿಸಲಾಗಿತ್ತು. ಈಗ ದರ್ಶನ್ ಬಂಧನ ಸಾಧ್ಯತೆ ನಡುವೆ, ರಮ್ಯಾ ಸಂತೋಷ ವ್ಯಕ್ತಪಡಿಸಿರುವುದು ಗಮನಾರ್ಹ
ನಿಮ್ಮ ಪ್ರತಿಕ್ರಿಯೆ ಏನು?