ನನ್ನ ಹೃದಯ ಛಿದ್ರವಾಗಿದೆ.. ನೋವು, ದುಃಖದಲ್ಲಿ ನರಳುತ್ತಿದ್ದೇನೆ: ಕಾಲ್ತುಳಿತ ದುರಂತಕ್ಕೆ ವಿಜಯ್ ಮೊದಲ ಪ್ರತಿಕ್ರಿಯೆ
ಕರೂರಿನಲ್ಲಿ ಶನಿವಾರ ನಡೆದ ಟಿವಿಕೆ ಪಕ್ಷದ ರ್‍ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 39 ಮಂದಿ ದುರ್ಮರಣ ಹೊಂದಿದ್ದಾರೆ. ಈ ಘಟನೆಗೆ ಸಂಬಂಧಿಸಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ವಿಜಯ್ ತಮ್ಮ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ವಿಜಯ್, “ನನ್ನ ಹೃದಯ ಛಿದ್ರವಾಗಿದೆ. ಪದಗಳಲ್ಲಿ ಹೇಳಲಾಗದ ಅಸಹನೀಯ ನೋವಿನಲ್ಲಿ ನರಳುತ್ತಿದ್ದೇನೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪ ಹಾಗೂ ಸಹಾನುಭೂತಿ ಸಲ್ಲಿಸುತ್ತೇನೆ. ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.
ಇದೇ ವೇಳೆ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್, ನ್ಯಾಯಮೂರ್ತಿ ಅರುಣಾ ಜಗದೀಶನ್ ಅವರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಿ ಪ್ರಕರಣದ ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ. ಜೊತೆಗೆ, ಮೃತರ ಕುಟುಂಬಗಳಿಗೆ ತಲಾ ರೂ.10 ಲಕ್ಷ ಪರಿಹಾರ ಘೋಷಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?