ನಮ್ಮ ತೆರಿಗೆ ಹಣದಿಂದ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಲ್ಲಿ ರಸ್ತೆ ಆಗುತ್ತಿವೆ: ಸತೀಶ್ ಜಾರಕಿಹೊಳಿ

ನಮ್ಮ ತೆರಿಗೆ ಹಣದಿಂದ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಲ್ಲಿ ರಸ್ತೆ ಆಗುತ್ತಿವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರಕ್ಕೆ ನಾವು 2 ಲಕ್ಷ ಕೋಟಿ ಜಿಎಸ್ಟಿ ಹಣ ಕೊಡುತ್ತೆವೆ, ಹೀಗಾಗಿ ಅದರ ಅರ್ಧ ಹಣವಾದ್ರು ಕೇಂದ್ರ ಸರ್ಕಾರ ನಮಗೆ ಕೊಡಬೇಕು.
ಸದ್ಯ 36 ಸಾವಿರ ಕೋಟಿ ಜಿಎಸ್ಟಿ ಹಣ ಮಾತ್ರ ನಮ್ಮಗೆ ಕೊಟ್ಟಿದ್ದಾರೆ. ನಮ್ಮ ತೆರಿಗೆ ಹಣವನ್ನ ಯಮುನಾ, ಗಂಗಾ ಹೈವೆ ಎಕ್ಸಪ್ರೇಸ್ಗೆ ಬಳಕೆ ಮಾಡುತ್ತಿದ್ದಾರೆ. ನಮ್ಮ ತೆರಿಗೆ ಹಣದಿಂದ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಲ್ಲಿ ರಸ್ತೆ ಆಗುತ್ತಿವೆ ಅಂತ ಆಕ್ಷೇಪ ಹೊರಹಾಕಿದ್ದಾರೆ.
ಇದೇ ವೇಳೆ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಇಲ್ಲ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿ, ಕಳೆದ 2 ವರ್ಷಗಳಿಂದ ಅವರು ಇದನ್ನೇ ಹೇಳ್ತಿದ್ದಾರೆ. ಇನ್ನೂ 3 ವರ್ಷ ಬಿಜೆಪಿಯವರು ಗ್ಯಾರಂಟಿಯಿಂದ ಅಭಿವೃದ್ಧಿ ಇಲ್ಲ ಅಂತಾ ಹೇಳ್ತಾರೆ. ಗ್ಯಾರಂಟಿಯಿಂದ ಯಾವ ಅಭಿವೃದ್ಧಿ ಸಹ ನಿಂತಿಲ್ಲ. ಬೊಮ್ಮಾಯಿ ಅವಧಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಅನುದಾನ ಇರಲಿಲ್ಲ. ನಮ್ಮ ಸರ್ಕಾರದಲ್ಲಿ ಎಲ್ಲ ಇಲಾಖೆಗಳಿಗೆ ಅನುದಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






