ನವೀಕರಿಸಬಹುದಾದ ಇಂಧನ ವಿಸ್ತರಣೆಗೆ ಆದ್ಯತೆ ನೀಡಿದ್ದರಿಂದ ಆಮದು ತಗ್ಗಿದೆ: ಜೋಶಿ!

ನವದೆಹಲಿ:- ನವೀಕರಿಸಬಹುದಾದ ಇಂಧನ ವಿಸ್ತರಣೆಗೆ ಆದ್ಯತೆ ನೀಡಿದ್ದರಿಂದ ಆಮದು ತಗ್ಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಮೆರ್ಕಾಮ್ ಇಂಡಿಯಾ’ ನವೀಕರಿಸಬಹುದಾದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನವೀಕರಿಸಬಹುದಾದ ಇಂಧನ ವಿಸ್ತರಣೆಗೆ ಆದ್ಯತೆ ನೀಡಿದ್ದರಿಂದ ಪಳೆಯುಳಿಕೆ ಇಂಧನ ಆಮದು ತಗ್ಗಿದೆ. ಅಲ್ಲದೇ, ಪರಿಸರ ಮಾಲಿನ್ಯ ಸಂಬಂಧಿತ ವೆಚ್ಚವನ್ನು ಸಹ ತಪ್ಪಿಸಿದೆ. ಈ ಮೂಲಕ ಸುಮಾರು 4 ಲಕ್ಷ ಕೋಟಿ ರೂ. ಆರ್ಥಿಕ ಉಳಿತಾಯಕ್ಕೆ ನೆರವಾಗಿದೆ ಎಂದು ಹೇಳಿದರು.
ಅಂತರಾಷ್ಟ್ರೀಯ ನವೀಕರಿಸಬಹುದಾದ ಇಂಧನ ಸಂಸ್ಥೆ ಅಧ್ಯಯನದ ಪ್ರಕಾರ ನವೀಕರಿಸಬಹುದಾದ ಇಂಧನದಿAದಾಗಿ ದೇಶದಲ್ಲಿ 14.9 ಬಿಲಿಯನ್ ಡಾಲರ್ ಪಳೆಯುಳಿಕೆ ಇಂಧನ ಆಮದು ಕಡಿಮೆಯಾಗಿದೆ. 410.9 ಮಿಲಿಯನ್ ಟನ್ CO₂ ಹೊರಸೂಸುವಿಕೆ ಸಹ ತಗ್ಗಿದೆ ಮತ್ತು 31.7 ಬಿಲಿಯನ್ ಡಾಲರ್ ಮೌಲ್ಯದಷ್ಟು ಆರೋಗ್ಯ ಮತ್ತು ವಾಯುಮಾಲಿನ್ಯದಿಂದ ಪ್ರಯೋಜನವಾಗಿದೆ ಎಂದರು.
ಪ್ರಧಾನಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆಯಡಿ 58.7 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದು, ಈಗಾಗಲೇ 17.2 ಲಕ್ಷ ಘಟಕಗಳು ಪೂರ್ಣಗೊಂಡಿವೆ. ಈ ವಲಯದಲ್ಲಿ 30 ಗಿಗಾವ್ಯಾಟ್ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ಸ್ ಗಾಗಿ 5,400 ಕೋಟಿ ರೂ. ಕಾರ್ಯಸಾಧ್ಯತಾ ಅಂತರ ನಿಧಿ ಯೋಜನೆ ಸಹ ಆರಂಭಿಸಲಾಗಿದೆ. ಇದು 33,000 ಕೋಟಿ ರೂ. ಅಷ್ಟು ಹೂಡಿಕೆ ಆಕರ್ಷಿಸುವ ನಿರೀಕ್ಷೆಯಿದೆ ಎಂದು ವಿವರಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






