ನಾಳೆ SSLC ಫಲಿತಾಂಶ ಪ್ರಕಟ : ರಿಸಲ್ಟ್ ಅನ್ನು ಆನ್ಲೈನ್ʼನಲ್ಲಿ ಪರಿಶೀಲಿಸುವುದು ಹೇಗೆ..?

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ನಾಳೆ ಕಟವಾಗಲಿದೆ. ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಟಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಸುದ್ದಿಗೋಷ್ಟಿ ಬಳಿಕ ಮಧ್ಯಾಹ್ನ 12:30ಕ್ಕೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ SSLC ಪರೀಕ್ಷೆ ನಡೆದಿತ್ತು. ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಎಸ್‌ಎಸ್‌ಎಲ್‌ಸಿ ನಲ್ಲಿ ಪ್ರಸಕ್ತ ಸಾಲಿನಲ್ಲಿ 15,881 ಶಾಲೆಗಳಲ್ಲಿ ಒಟ್ಟು 8,42,817 ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದಾರೆ. 38,091 ಪುನರಾವರ್ತಿತ ಮತ್ತು 15,539 ಖಾಸಗಿ ಸೇರಿ 8,96,447 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. 3,35,468 ಬಾಲಕರು, 3,78,389 ಬಾಲಕಿಯರು ಮತ್ತು 5 ತೃತೀಯ ಲಿಂಗಿಗಳು ಇದ್ದಾರೆ. 2,818 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದೆ.
ಎಸ್ಎಸ್ಎಲ್ಸಿ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ನೋಡುವುದು ಹೇಗೆ?
• ಅಧಿಕೃತ ವೆಬ್‌ಸೈಟ್ಗಳಾದ https://karresults.nic.in/ ಮತ್ತು kseab.karnataka.gov.in ಭೇಟಿ ನೀಡಿ.
• ಮುಖಪುಟದಲ್ಲಿರುವ ‘SSLC ಫಲಿತಾಂಶ 2025’ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
• SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್ಮೀಟ್ ಮೇಲೆ ಕ್ಲಿಕ್ ಮಾಡಬೇಕು.
• ಬಳಿಕ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಪ್ರದರ್ಶನಗೊಳ್ಳುತ್ತದೆ.
• ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಆಫ್ ಲೈನ್‌ನಲ್ಲಿ ಫಲಿತಾಂಶವನ್ನು ನೋಡಲು ಬಯಸುವವರು ತಮ್ಮ ನೋಂದಣಿ ಸಂಖ್ಯೆಯೊಂದಿಗೆ 56263 ಗೆ ಎಸ್ಎಂಎಸ್ ಕಳುಹಿಸುವ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






