ನಿಗೂಢ ಸ್ಫೋಟ: ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ CM ಸಿದ್ದರಾಮಯ್ಯ

ಆಗಸ್ಟ್ 15, 2025 - 14:01
 0  14
ನಿಗೂಢ ಸ್ಫೋಟ: ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ CM ಸಿದ್ದರಾಮಯ್ಯ

ಬೆಂಗಳೂರು: ನಗರದ ಆಡುಗೊಡಿಯಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡ 8 ವರ್ಷದ ಮುಬಾರಕ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಇಂದು ಅವರು ಸ್ಫೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಮತ್ತು ಮಾಧ್ಯಮಗಳಿಗೆ ಘಟನೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು.

ಸ್ಫೋಟ ಕಸ್ತೂರಮ್ಮ ಎಂಬುವರ ಮನೆಯಲ್ಲಿ ಸಂಭವಿಸಿದ್ದು, ಮನೆ ವರಾಂಡಾಕಾರವಾಗಿರುವುದರಿಂದ ಅಕ್ಕಪಕ್ಕದ ಹಲವಾರು ಮನೆಗಳಿಗೆ ಹಾನಿಯಾಗಿದೆ. ಸ್ಫೋಟದಲ್ಲಿ 9 ಮಂದಿ ಗಾಯಗೊಂಡಿದ್ದು, ಕಸ್ತೂರಮ್ಮ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಅವರ ಚಿಕಿತ್ಸೆ ಹಾಗೂ ಇತರ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುವುದಾಗಿ ಮುಖ್ಯಮಂತ್ರಿ ಹೇಳಿದರು.

"ಮೇಲನೋಟಕ್ಕೆ ಸಿಲಿಂಡರ್ ಸ್ಫೋಟವೇ ದುರ್ಘಟನೆಗೆ ಕಾರಣ ಎಂದು ತೋರುತ್ತದೆ. ಹಾನಿಯಾದ ಮನೆಗಳ ರಿಪೇರಿಗೆ ಕೂಡ ಸೂಚನೆ ನೀಡಲಾಗಿದೆ. ಪಕ್ಕದ ಮನೆಗಳಿಗೆಂಟು ಹಾನಿಯಿರುವುದನ್ನು ಕೂಡ ಪರಿಶೀಲಿಸಲಾಗುತ್ತದೆಎಂದು ಸಿಎಂ ಹೇಳಿದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow