ನಿರುದ್ಯೋಗಿಗಳಿಗೆ ಬಂಪರ್ ಸುದ್ದಿ: ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಉದ್ಯೋಗ! ಕನ್ನಡಿಗರು ಅಪ್ಲೈ ಮಾಡಿ!

ನವೆಂಬರ್ 7, 2024 - 08:11
 0  15
ನಿರುದ್ಯೋಗಿಗಳಿಗೆ ಬಂಪರ್ ಸುದ್ದಿ: ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಉದ್ಯೋಗ! ಕನ್ನಡಿಗರು ಅಪ್ಲೈ ಮಾಡಿ!

ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕರ್ನಾಟಕದ ಲೋಕಾಯುಕ್ತ ಇಲಾಖೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

ಕರ್ನಾಟಕದ ಲೋಕಯುಕ್ತ ಇಲಾಖೆಯ ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿಗಳನ್ನು ಅಪ್ಲೇ ಮಾಡಬಹುದು.

ಈ ಎಲ್ಲ ಅರ್ಜಿಗಳು ಆನ್​ಲೈನ್ ಮೂಲಕ ಸಲ್ಲಿಸಬೇಕಾಗಿದ್ದು ಬೇರೆ ಮೂಲದಿಂದ ಬರುವ ಅರ್ಜಿಗಳನ್ನು ಇಲಾಖೆ ಗಣನೆಗೆ ತೆಗೆದುಕೊಳ್ಳಲ್ಲ ಎಂದು ತಿಳಿಸಿದೆ. ಕರ್ನಾಟಕ ಲೋಕಾಯುಕ್ತ ನಿಯಮಗಳು 1988 ಹಾಗೂ ಕರ್ನಾಟಕ ಸಾರ್ವಜನಿಕ ಉದ್ಯೋಗ ಅರ್ಹತಾ ಪ್ರಮಾಣ ಪತ್ರ ಹೊಂದಿರಬೇಕು. ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ ವಿದ್ಯಾರ್ಹತೆ, ಅರ್ಜಿ ಶುಲ್ಕ, ವೇತನ ಶ್ರೇಣಿ, ಹುದ್ದೆ ಹೆಸರು ಏನು, ನೇಮಕಾತಿ ಪ್ರಕ್ರಿಯೆ ಏನೆಂಬುದು ಇಲ್ಲಿ ನೀಡಲಾಗಿದೆ.

ಹುದ್ದೆಯ ಹೆಸರು- ಕ್ಲರ್ಕ್​ ಕಮ್ ಟೈಪಿಸ್ಟ್​
ಒಟ್ಟು ಹುದ್ದೆಗಳು- 14
ವೇತನ ಶ್ರೇಣಿ- ₹34,100 ರಿಂದ ₹67.600
ಶೈಕ್ಷಣಿಕೆ ವಿದ್ಯಾರ್ಹತೆ

ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಪಾಸ್ ಆಗಿರಬೇಕು
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು. (ಅಂಕಪಟ್ಟಿ ಹೊಂದಿರಲೇಬೇಕು)

ನೇಮಕಾತಿ ಪ್ರಕ್ರಿಯೆ ಹೇಗಿದೆ..?

ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು ಪರಿಗಣಿಸಿ ಮೀಸಲಾತಿ ಆಧಾರದಲ್ಲಿ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ತಯಾರಿಸಲಾಗುತ್ತದೆ. ಪಟ್ಟಿಯಲ್ಲಿರುವ ಹೆಸರು ಪಡೆದವರಿಗೆ ಇಲಾಖೆ ಪರೀಕ್ಷೆ ನಡೆಸುತ್ತದೆ. ಈ ಪರೀಕ್ಷೆಯಲ್ಲಿ ಕನಿಷ್ಠ ಶೇ50 ರಷ್ಟು ಅಂಕಗಳನ್ನು ಅಭ್ಯರ್ಥಿಗಳು ಪಡೆಯಲೇಬೇಕು.

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ, 2ಎ, 2ಬಿ, 3ಎ, 3ಬಿ, ಮಾಜಿ ಸೈನಿಕ- 250 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶೇಷ ಚೇತನರು- ಶುಲ್ಕ ವಿನಾಯಿತಿ
ಆನ್​ಲೈನ್​ ಮೂಲಕ ಶುಲ್ಕ ಪಾವತಿ ಮಾಡಬೇಕು

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ

ಅರ್ಜಿ ಸಲ್ಲಿಕೆಯ ಕೊನೆ ದಿನಾಂಕ- 29 ನವೆಂಬರ್ 2024
ಶುಲ್ಕ ಪಾವತಿಗೆ ಕೊನೆ ದಿನಾಂಕ- 30 ನವೆಂಬರ್ 2024

ವಯೋಮಿತಿ- 18 ರಿಂದ 43 ವರ್ಷದ ಒಳಗಿನವರಿಗೆ ಅವಕಾಶ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow