ನಿರುದ್ಯೋಗಿಗಳೇ ಗಮನಿಸಿ: ನಾಳೆ ಚಿಕ್ಕಮಗಳೂರಿನಲ್ಲಿ ಉದ್ಯೋಗ ಸಂದರ್ಶನ: ಅರ್ಹರು ಪಾಲ್ಗೊಳ್ಳಿ!

PUC, ಡಿಗ್ರಿ ಮಾಡಿ ಖಾಲಿ ಕೂತಿದ್ದೀರಾ!? ಹಾಗಿದ್ರೆ ನಿಮಗಿದೋ ಇಲ್ಲಿದೆ ಜಾಬ್ ಆಫರ್. ಈ ಹುದ್ದೆಗೆ ಉದ್ಯೋಗ ಮೇಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತದೆ.
ಎಸ್, ಕಾಫಿನಾಡು ಚಿಕ್ಕಮಗಳೂರಿನಲ್ಲಿ ಉದ್ಯೋಗಾವಕಾಶ ಇದೆ. ಆಸಕ್ತರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿಕ್ಕಮಗಳೂರು ಕಚೇರಿಯಲ್ಲಿ ಜನವರಿ 22 ರಂದು ಬೆಳಿಗ್ಗೆ 10.30 ಗಂಟೆಗೆ ಖಾಸಗಿ ಕಂಪನಿಯಾದ ಸುಗುಣ ಫುಡ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಚಿಕ್ಕಮಗಳೂರಿನಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ಪ್ರವೇಶವಾಗಿದೆ. ಯಾವುದೇ ಪದವಿ ಅರ್ಹತೆ ಹೊಂದಿರುವ 18 ರಿಂದ 35 ವರ್ಷ ವಯೋಮಿತಿಯ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದೂರವಾಣಿ: 9945198500/ 08262-295538ಗೆ ಸಂಪರ್ಕಿಸಬಹುದಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






