ನಿರ್ಜನ ಪ್ರದೇಶದಲ್ಲಿ ಪಾರ್ಕ್ ಮಾಡಲಾದ ಕಾರಿನಲ್ಲಿ 1.15 ಕೋಟಿ ಹಣ ಪತ್ತೆ! ದರೋಡೆ ಹಣದ ಶಂಕೆ?

ಕಾರವಾರ:- ಅಂಕೋಲದ ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರ ಪಕ್ಕದ ನಿರ್ಜನ ಪ್ರದೇಶದಲ್ಲಿ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ರೂ. ಪತ್ತೆಯಾದ ಘಟನೆ ಜರುಗಿದೆ.
ನಿನ್ನೆ ಅಂದ್ರೆ ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು ಪಾರ್ಕ್ ಮಾಡಲಾಗಿತ್ತು. ಈ ಬಗ್ಗೆ ಅಂಕೋಲಾ ಪೊಲೀಸರಿಗೆ ಸಾರ್ವಜನಿಕರಿಂದ ಮಾಹಿತಿ ಸಿಗುತ್ತಿದ್ದಂತೆ ಪರಿಶೀಲನೆಗೆ ಬಂದ ಪೊಲೀಸರು ಕಾರಿನ ಬಾಗಿಲು ಓಪನ್ ಮಾಡಿ ಪರಿಶೀಲನೆ ನಡೆಸಿದ ವೇಳೆ ಕಾರಿನಲ್ಲಿ ಕಬ್ಬಿಣದ ಬಾಕ್ಸ್ ಸಿಕ್ಕಿದ್ದು, ಅದನ್ನು ತೆರೆದು ನೋಡಿದಾಗ ಅದರಲ್ಲಿ 1.15 ಕೋಟಿ ಹಣ ಇರುವುದು ಕಂಡುಬಂದಿದೆ.
ಕೆಎ 51 ಎಮ್ಬಿ 9634 ನಂಬರ್ ಪ್ಲೇಟಿನ ಕಾರು ಇದಾಗಿದೆ. ಕಾರಿನ ರಿಜಿಸ್ಟ್ರೇಷನ್ ನಂಬರ್ ಅನ್ನು ಪರಿಶೀಲಿಸಿದಾಗ ಆಲ್ಟ್ರೋಜ್ ಕಾರು ಎಂದು ತೋರಿಸಿದ್ದು, ಮಡಿಕೇರಿ ಆರ್ಟಿಓ ಪಾಸಿಂಗ್ ಹೊಂದಿದೆ. ಸದ್ಯ ಅಂಕೋಲ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದು ,ಯಾವುದೋ ದರೋಡೆ ಮಾಡಿ ಹಣ ಸಾಗಿಸುತ್ತಿರುವ ಅನುಮಾನ ವ್ಯಕ್ತಪಡಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






