ನೆನೆರಾ ನಾಗವಲ್ಲಿ! ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ ಬದಲಾವಣೆಗೆ ಕಾರಣ!? ಫೋಟೋ ವೈರಲ್!

ಬಿಗ್ಬಾಸ್ ಸೀಸನ್ 11 ರಿಯಾಲಿಟಿ ಶೋನಿಂದ ಆಚೆ ಬಂದ ಬೆನ್ನಲ್ಲೇ ಚೈತ್ರಾ ಕುಂದಾಪುರ ಅವರ ಲುಕ್ ಫುಲ್ ಚೇಂಚ್ ಆಗಿದೆ. ಬಿಗ್ಬಾಸ್ ಮನೆಯಲ್ಲಿದ್ದಾಗ ಚೈತ್ರಾ ಅವರು ಸಿಂಪಲ್ ಆಗಿ ಇರುತ್ತಿದ್ದರು. ಆದ್ರೆ, ಬಿಗ್ಬಾಸ್ನಿಂದ ಆಚೆ ಬರುತ್ತಿದ್ದಂತೆ ಎಲ್ಲವೂ ಬದಲಾಗಿ ಬಿಟ್ಟಿದೆ. ದಿನೇ ದಿನೇ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಹೊಸ ವಿಡಿಯೋಗಳನ್ನು ಶೇರ್ ಮಾಡುತ್ತಿದ್ದಾರೆ.
ಇತ್ತೀಚೆಗೆ ಚೈತ್ರಾ ಕುಂದಾಪುರ ಅವರು ರಶ್ಮಿಕಾ ಮಂದಣ್ಣ ಅವರ ಛಾವಾ ಸಿನಿಮಾ ಲುಕ್ ಅನ್ನು ರಿಕ್ರಿಯೇಟ್ ಮಾಡಿದ್ದರು. ಸೇಮ್ ಟು ಸೇಮ್ ರಶ್ಮಿಕಾ ಮಂದಣ್ಣ ಗೆಟಪ್ನಲ್ಲಿ ಕಾಣಿಸಿಕೊಂಡು ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಶುಭಾಶಯಗಳನ್ನು ತಿಳಿಸಿದ್ದರು.
ಚೈತ್ರಾ ಕುಂದಾಪುರ ಅವರು ಸದ್ಯ ಬಾಯ್ಸ್ ವರ್ಸಸ್ ಗರ್ಲ್ಸ್ ರಿಯಾಲಿಟಿ ಶೋನಲ್ಲಿ ಮಿಂಚುತ್ತಿದ್ದಾರೆ. ಬಾಯ್ಸ್ ವರ್ಸಸ್ ಗರ್ಲ್ಸ್ನಲ್ಲಿ ಇದೀಗ ನಾಗವಲ್ಲಿ ಸೀನ್ ರಿಕ್ರಿಯೇಟ್ ಮಾಡೋ ಚಾಲೆಂಜ್ ಅನ್ನ ಚೈತ್ರಾ ಕುಂದಾಪುರ ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಗವಲ್ಲಿಯಾಗಿ ಬದಲಾಗಿರುವ ಫೈರ್ ಬ್ರ್ಯಾಂಡ್ ಮತ್ತೊಮ್ಮೆ ಹೊಸ ಹಿಸ್ಟ್ರಿ ಕ್ರಿಯೇಟ್ ಮಾಡೋ ಉತ್ಸಾಹದಲ್ಲಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






