ನೇರಳೆ ಹಣ್ಣು ಒಳ್ಳೆಯದೇ, ಆದ್ರೆ ಹೀಗೆ ತಿಂದ್ರೆ ಆರೋಗ್ಯ ಕೆಡುತ್ತೆ ಹುಷಾರ್!
ಆಯಾ ಋತುವಿನಲ್ಲಿ ಸಿಗುವ ಹಣ್ಣುಗಳನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ವಿಶೇಷವಾಗಿ ಮಳೆಗಾಲದಲ್ಲಿ ಮಾರುಕಟ್ಟೆಯಲ್ಲಿ ಬಹಳಷ್ಟು ನೇರಳೆ ಹಣ್ಣುಗಳನ್ನು ನಾವು ನೋಡುತ್ತೇವೆ. ಬಹತೇಕ ಜನರು ಅವುಗಳನ್ನು ಇಷ್ಟಪಟ್ಟು ತಿನ್ನುತ್ತಾರೆ. ನೇರಳೆ ಹಣ್ಣುಗಳು ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದ್ದು, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ನೇರಳೆ ಹಣ್ಣು ಒಂದು ಸೀಸನಲ್ ಹಣ್ಣಾಗಿರುವುದರಿಂದ, ಬೇಸಿಗೆಯಲ್ಲಿ ಹೆಚ್ಚಾಗಿ ಮಾರುಕಟ್ಟೆಯಲ್ಲಿ ಕಾಣಸಿಗುತ್ತದೆ. ಇದನ್ನು ಜಾಮೂನ್ ಎಂದೂ ಕರೆಯುತ್ತಾರೆ. ಈ ಹಣ್ಣು ಅದರ ಗಾಢ ಬಣ್ಣ ಮತ್ತು ಹುಳಿ ಸಿಹಿ ರುಚಿಯಿಂದಾಗಿ ತುಂಬಾ ಜನರು ಇದನ್ನು ಇಷ್ಟಪಡುತ್ತಾರೆ. ಅನೇಕ ಆಯುರ್ವೇದ ಗುಣಗಳನ್ನು ಹೊಂದಿರುವ ಈ ಹಣ್ಣಿನಲ್ಲಿ ವಿಟಮಿನ್ ಗಳು ಹೇರಳವಾಗಿವೆ.
ಆಯುರ್ವೇದ ವೈದ್ಯರು ಜಾಮೂನ್‌ನ ಆಯುರ್ವೇದ ಗುಣಲಕ್ಷಣಗಳನ್ನು ಮತ್ತು ಅದನ್ನು ತಿನ್ನುವ ಪ್ರಯೋಜನಗಳನ್ನು ಹಂಚಿಕೊಂಡಿದ್ದಾರೆ. ಐಬಿಎಸ್, ಅತಿಸಾರ, ಅತಿಯಾದ ರಕ್ತಸ್ರಾವ , ಲ್ಯುಕೋರಿಯಾ , ವಾಕರಿಕೆ ಮತ್ತು ವಾಂತಿ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ನೇರಳೆ ಹಣ್ಣು ಅಮೃತವಾಗಿದೆ.
ಇದರ ಗುಣಲಕ್ಷಣಗಳು ಹೃದಯದ ಆರೋಗ್ಯಕ್ಕೂ ಒಳ್ಳೆಯದು ಜೊತೆಗೆ ಮಧುಮೇಹಿಗಳಿಗೂ ಈ ಹಣ್ಣು ಬಹಳ ಪ್ರಯೋಜನಕಾರಿಯಾಗಿದೆ. ನೇರಳೆ ಹಣ್ಣಿನ ಪ್ರಯೋಜನಗಳ ಬಗ್ಗೆ ತಿಳಿದ ನಂತರ ಅನೇಕ ಜನರು ಅದನ್ನು ಅತಿಯಾಗಿ ಸೇವಿಸಲು ಪ್ರಾರಂಭಿಸುತ್ತಾರೆ. ಆದರೆ ಹಾಗೆ ಮಾಡುವುದು ಅಪಾಯಕಾರಿಯಾಗಬಹುದು
ನೇರಳೆ ಹಣ್ಣನ್ನು ಮಾತ್ರವಲ್ಲದೆ ಅದರ ಬೀಜಗಳು, ತೊಗಟೆ ಮತ್ತು ಎಲೆಗಳನ್ನು ವಿವಿಧ ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇಡೀ ದೇಹದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿರುವ ಫ್ಲೇವನಾಯ್ಡ್‌ಗಳ ಜೊತೆಗೆ ಜಾಮೂನ್ ಉತ್ಕರ್ಷಣ ನಿರೋಧಕಗಳ ಶ್ರೀಮಂತ ಮೂಲವಾಗಿದೆ.
ಯಾವ ರೋಗಕ್ಕೆಲ್ಲಾ ಒಳ್ಳೆಯದು:
ಮಧುಮೇಹ
ರಕ್ತಹೀನತೆ
ಹೈಪರ್ಗ್ಲೈಸೀಮಿಯಾ
ಕೆಮ್ಮು
ಉಬ್ಬಸ
ಬ್ರಾಂಕೈಟಿಸ್
ದೌರ್ಬಲ್ಯ
ಲೈಂಗಿಕ ದೌರ್ಬಲ್ಯ
ಲ್ಯುಕೋರೋಹಿಯಾ
ಮಾನಸಿಕ ಅಸ್ವಸ್ಥತೆಗಳು
ಆಯುರ್ವೇದದಲ್ಲಿ, ನೇರಳೆ ಹಣ್ಣಿನ ಸೇವನೆಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ಗಮನ ಹರಿಸಲು ಸಲಹೆ ನೀಡಲಾಗಿದೆ. ಆಯುರ್ವೇದದ ಪ್ರಕಾರ ಜಾಮೂನ್ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ಇದಲ್ಲದೆ, ಈ ಹಣ್ಣನ್ನು ತಿಂದ ನಂತರ ಮತ್ತು ಮೊದಲು ಕನಿಷ್ಠ ಒಂದು ಗಂಟೆಯವರೆಗೆ ಹಾಲನ್ನು ಕುಡಿಯಬಾರದು. ಒಂದು ವೇಳೆ ಹಾಗೆ ಮಾಡಿದರೆ ಪ್ರಯೋಜನಗಳ ಬದಲಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು
ಜಾಮೂನ್ ವಿಟಮಿನ್ ಎ ಮತ್ತು ಸಿ ಯ ಉತ್ತಮ ಮೂಲವಾಗಿದೆ, ಇದು ಕಣ್ಣು ಮತ್ತು ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರೊಂದಿಗೆ, ಹೊಳೆಯುವ ಚರ್ಮಕ್ಕಾಗಿ ಮತ್ತು ಮೊಡವೆಗಳನ್ನು ಮೂಲದಿಂದ ತೆಗೆದುಹಾಕಲು ಸಹ ನೇರಳೆ ಹಣ್ಣನ್ನುಸೇವಿಸಲಾಗುತ್ತದೆ. ನೀವು ಹೆಚ್ಚು ಹಣ್ಣುಗಳನ್ನು ಸೇವಿಸಿದರೆ ಅದು ನಿಮ್ಮ ತ್ವಚೆಗೆ ಸಮಸ್ಯೆಗಳನ್ನು ಉಂಟುಮಾಡಬಹುದು.
ಜಾಮೂನಿನಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಹಾಗಂತ ನೀವು ಸಿಕ್ಕಾಪಟ್ಟೆ ತಿಂದರೆ ಮಲಬದ್ಧತೆ ಸಮಸ್ಯೆ ಕಾಡಬಹುದು. ಹಾಗಾಗಿ ಸ್ವಲ್ಪ ಪ್ರಮಾಣದಲ್ಲಿ ತಿನ್ನುವುದು ಆರೋಗ್ಯದ ದೃಷ್ಠಿಯಿಂದ ಒಳ್ಳೆಯದಯ.
ಜಾಮೂನಿನಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಹಾಗಂತ ನೀವು ಸಿಕ್ಕಾಪಟ್ಟೆ ತಿಂದರೆ ಮಲಬದ್ಧತೆ ಸಮಸ್ಯೆ ಕಾಡಬಹುದು. ಹಾಗಾಗಿ ಸ್ವಲ್ಪ ಪ್ರಮಾಣದಲ್ಲಿ ತಿನ್ನುವುದು ಆರೋಗ್ಯದ ದೃಷ್ಠಿಯಿಂದ ಒಳ್ಳೆಯದು.
ನಿಮ್ಮ ಪ್ರತಿಕ್ರಿಯೆ ಏನು?