ನೇಹಾ ಹಿರೇಮಠ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ! ಹಂತಕ ಫಯಾಜ್ʼಗೆ ಜೈಲೇ ಗತಿ

ಸೆಪ್ಟೆಂಬರ್ 3, 2025 - 16:05
 0  18
ನೇಹಾ ಹಿರೇಮಠ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ! ಹಂತಕ ಫಯಾಜ್ʼಗೆ ಜೈಲೇ ಗತಿ

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಆರೋಪಿ ಫಯಾಜ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಇಂದು ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾಳನ್ನು ಫಯಾಜ್ ಚಾಕುವಿನಿಂದ ಹತ್ತಿ ಕೊಲೆ ಮಾಡಿದ್ದ ಆರೋಪ ಎದುರಾಗಿತ್ತು.

ಈ ಹಿನ್ನೆಲೆಯಲ್ಲಿ ಜೈಲಿನಲ್ಲಿ ಇರುವ ಫಯಾಜ್ ಜಾಮೀನು ಕೋರಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರೂ, ನ್ಯಾಯಾಲಯವೇ ಅದನ್ನು ನಿರಾಕರಿಸಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಸಹ ವಜಾಗೊಳಿಸಿ, ಫಯಾಜ್‌ಗೆ ಜೈಲಿನಲ್ಲಿ ಮುಂದುವರಿಯುವಂತೆ ಆದೇಶ ಹೊರಡಿಸಿದೆ.

ಏಪ್ರಿಲ್ 18, 2024ರಂದು, ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ 24 ವರ್ಷದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆ ನಡೆದಿತ್ತು. ಫಯಾಜ್ ಎನ್ನುವ ಯುವಕ 10 ಕ್ಕೂ ಹೆಚ್ಚು ಬಾರಿ  ಚಾಕುವಿನಿಂದ ಹಿರಿದು ನೇಹಾಳನ್ನ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ. ಬಳಿಕ ಪೊಲಿಸರು ಕಾರ್ಯಚರಣೆ ನಡೆಸಿ ಆರೋಪಿ ಬೆಳಗಾವಿ ಜಿಲ್ಲೆಯ ಫಯಾಜ್ ಕೊಂಡುನಾಯ್ಕ್ (24) ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು ಪ್ರಕರಣವು ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ಪ್ರತಿಭಟನೆ ನಡೆಸಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow