ಪಂಚಮಸಾಲಿ ಹೋರಾಟದಲ್ಲಿ ಕಲ್ಲು ಹೊಡೆದವ್ರು ಬಿಜೆಪಿ ಕಾರ್ಯಕರ್ತರು ಹಾಗೂ RSS ನವ್ರು: ವಿಜಯಾನಂದ ಕಾಶಪ್ಪನವರ್

ಡಿಸೆಂಬರ್ 12, 2024 - 19:05
 0  22
ಪಂಚಮಸಾಲಿ ಹೋರಾಟದಲ್ಲಿ ಕಲ್ಲು ಹೊಡೆದವ್ರು ಬಿಜೆಪಿ ಕಾರ್ಯಕರ್ತರು ಹಾಗೂ RSS ನವ್ರು: ವಿಜಯಾನಂದ ಕಾಶಪ್ಪನವರ್

 

ಬೆಳಗಾವಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದಿಂದ ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ನಡೆದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಶಕ್ತಿ ಸೌಧಕ್ಕೆ ನುಗ್ಗಲು ಹೊರಟವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದರೆ, ಇತ್ತ ಪೊಲೀಸರ ಮೇಲೆ ಕಲ್ಲು, ಚಪ್ಪಲಿ ತೂರಿ ಉದ್ರಿಕ್ತರು ಆಕ್ರೋಶ ಹೊರ ಹಾಕಿದ್ದರು. ಇನ್ನು ಈ ಬಗ್ಗೆ ಬೆಳಗಾವಿ ಸುವರ್ಣಸೌಧದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಮಾತನಾಡಿದ್ದಾರೆ.

ನಮ್ಮ ಸಮಾಜದ ಅಮಾಯಕರ ಮೇಲೆ ಲಾಠಿ ಚಾರ್ಕ್ ಮಾಡುವ ಹಾಗಾಯಿತು. ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್​​ನವರು. ಪೊಲೀಸರ ಮೇಲೆ ಕಲ್ಲು ತೂರಲು ಪ್ರವೋಕ್ ಮಾಡಿದ್ದು ಸ್ವಾಮೀಜಿ. ಸಮಾಜವನ್ನ ಕಟ್ಟುವ ಕೆಲಸ ನಮಗೆ ಗೊತ್ತಿದೆ ಎಂದು ಹೇಳಿದ್ದಾರೆ.

ಸ್ವಾಮೀಜಿಗೆ ಗೌರವ ಕೊಡುತ್ತೇನೆ. 712 ಕಿ.ಮೀ ಹೋರಾಟ ಮಾಡಿದ್ದೇವೆ. ಪ್ರತಿಭಟನೆ ವೇಳೆ ಒಂದಾದರೂ ಗಲಾಟೆ ಆಯ್ತಾ? ಉದ್ದೇಶ ಪೂರ್ವಕವಾಗಿ ಈಗ ಗಲಾಟೆ ಮಾಡಿಸಿದ್ದಾರೆ. ಗಾಯಾಳುಗಳನ್ನ ಯಾರು ನೋಡಿಕೊಳ್ಳುತ್ತಾರೆ. ಸ್ವಾಮೀಜಿ ನೋಡ್ಕೋತಾರ? ಮುಖಂಡರು ನೋಡಿಕೊಳ್ಳುತ್ತಾರಾ? ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದೆ ಅದನ್ನ ತೆಗೆಯಬೇಕು. ಸ್ವಾಮೀಜಿ ತೀರ್ಮಾನ ಒಂದೇ ಅಲ್ಲಾ ಸಮಾಜ ಇದೆ. ನಾವು 12 ಜನ ಶಾಸಕರು ಇದ್ದೇವೆ. ಬಿಜೆಪಿ ಪಾರ್ಟಿಯ ವೇದಿಕೆಗೆ ಹೋಗಿ ಭಾಷಣ ಮಾಡುತ್ತಾರೆ. ನಾವು ಮೀಸಲಾತಿ ಕೊಡಿಸುತ್ತೇವೆ ಎಂದಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow