ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್: ಬೆಂಗಳೂರಿನಲ್ಲಿ ಒಂದೇ ದಿನ ಸಾವಿರಕ್ಕೂ ಹೆಚ್ಚು ಕೇಸ್ ದಾಖಲು!

ನವೆಂಬರ್ 1, 2024 - 22:00
 0  21
ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್: ಬೆಂಗಳೂರಿನಲ್ಲಿ ಒಂದೇ ದಿನ ಸಾವಿರಕ್ಕೂ ಹೆಚ್ಚು ಕೇಸ್ ದಾಖಲು!

ಬೆಂಗಳೂರು:-ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ದಂಡ ವಿಧಿಸುವ ಕ್ರಮವನ್ನೂ ಕೈಗೊಳ್ಳುತ್ತಿದ್ದಾರೆ. ಹೀಗಿದ್ದರೂ ಒಂದಷ್ಟು ವಾಹನ ಸವಾರರು ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವುದು ಕಂಡುಬಂದಿದೆ. ಇಂತಹವರ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಚರಣೆ ಮಾಡಿದ್ದಾರೆ. 

 ಬೆಂಗಳೂರು ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆ ಸಂಚಾರಿ ಪೊಲೀಸರು ಒಂದೇ ದಿನ ಸಾವಿರಕ್ಕೂ ಹೆಚ್ಚು ಕೇಸ್ ದಾಖಲು ಮಾಡಿದ್ದಾರೆ. 

ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿದ 1,055 ಪ್ರಕರಣಗಳು ದಾಖಲಾಗಿವೆ.

ಇವುಗಳಲ್ಲಿ 812 ವಾಹನ ಚಾಲಕರ ವಿರುದ್ಧ ಏಕಮುಖ ಸಂಚಾರ ಇರುವಲ್ಲಿ ನಿಯಮ ಉಲ್ಲಂಘಿಸಿ ಎದುರಿನಿಂದ ಬಂದ ಮತ್ತು ನಿರ್ಬಂಧಿತ ರಸ್ತೆಗಳಲ್ಲಿ ವಾಹನ ಚಲಾಯಿಸಿದ ಪ್ರಕರಣಗಳನ್ನು ದಾಖಲಿಸಲಾಗಿದೆ. 127 ಚಾಲಕರಿಗೆ ಫುಟ್‌ಪಾತ್‌ನಲ್ಲಿ ವಾಹನ ನಿಲುಗಡೆ ಮಾಡಿದ್ದಕ್ಕಾಗಿ ಒಟ್ಟು 64,000 ರೂ. ದಂಡ ವಿಧಿಸಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow