ಪಿಎಸ್ಐ ಪತ್ನಿ ಆತ್ಮಹತ್ಯೆ: ದಿಢೀರ್ ನಿರ್ಧಾರಕ್ಕೆ ಕಾರಣ?
ಬಳ್ಳಾರಿ:- ಬಳ್ಳಾರಿ ಜಿಲ್ಲೆಯ ಮೋಕಾದಲ್ಲಿ ಪಿಎಸ್ಐ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಇವರುಮೋಕಾ ಪೊಲೀಸ್ ಠಾಣೆ ಪಿಎಸ್ಐ ಕೆ.ಕಾಳಿಂಗ ಪತ್ನಿ. ಸಹೋದರ ಹಾಗೂ ಇಬ್ಬರು ಸಹೋದರಿಯರ ಸಾವಿನಿಂದ ಚೈತ್ರಾ ಮಾನಸಿಕ ಖಿನ್ನತೆಗೆ ಒಳಗಾಗಿದ್ರು ಎನ್ನಲಾಗಿದೆ.
2 ತಿಂಗಳ ಹಿಂದೆ ಚೈತ್ರಾ ಅವರ ಏಕೈಕ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದ. 2 ವರ್ಷಗಳ ಅಂತರದಲ್ಲಿ ಇದ್ದ ಒಬ್ಬ ಸಹೋದರ ಹಾಗೂ ಇಬ್ಬರು ಸಹೋದರಿಯರು ಮೃತಪಟ್ಟಿದ್ರು. ಹೀಗಾಗಿ ಚೈತ್ರಾ ಮಾನಸಿಕ ಖಿನ್ನತೆಗೆ ಒಳಗಾಗಿದ್ರು ಅಂತ ತಿಳಿದುಬಂದಿದೆ.ಪತ್ನಿ ಕಳೆದುಕೊಂಡ ಪತಿ ಕಾಳಿಂಗ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನಿಮ್ಮ ಪ್ರತಿಕ್ರಿಯೆ ಏನು?