ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ಬಂಧನ

ಬಾಗಲಕೋಟೆ: ಮೋದಿಯ ಫೋಟೋವನ್ನು ಎಡಿಟ್ ಮಾಡಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 27 ವರ್ಷದ ಮೊಹಮ್ಮದ್ ಅಜೀಜ್ ರೋಣ ಬಂಧಿತ ಆರೋಪಿಯಾಗಿದ್ದು, ಮೋದಿ ಫೋಟೋ ಎಡಿಟ್ ಮಾಡಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೊಹಮ್ಮದ್ ಕೇಸರಿ ಬಟ್ಟೆ ಧರಿಸಿದ ಪ್ರಧಾನಮಂತ್ರಿ ಮೋದಿ ಅವರನ್ನು ಕೈದಿಯಂತೆ ಜೈಲಿನಲ್ಲಿ ಬಂಧಿಸಿದ ರೀತಿ ಎಡಿಟ್ ಮಾಡಿದ್ದ.
ಮೋದಿಯವರ ಮುಂದೆ ಒವೈಸಿ ಪೊಲೀಸ್ ಅಧಿಕಾರಿಯ ವೇಷದಲ್ಲಿ ಕೂತಿರುವ ರೀತಿ ಎಡಿಟ್ ಮಾಡಿದ್ದ. ಈ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ.
ಈ ಫೋಟೋ ವೈರಲ್ ಆಗುತ್ತಿದ್ದಂತೆ ಮೊಹಮ್ಮದ್ ಅಜಿಜ್ ಅಬ್ದುಲ್ ಸಾಬ್ ರೋಣ ವಿರುದ್ಧ ಸುಮೋಟೋ ಕೇಸ್ ಹಾಕಿ ಆರೋಪಿಯನ್ನು ಕಲಾದಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಅಜೀಜ್ ಕಲಾದಗಿ ಪಟ್ಟಣದ ನಿವಾಸಿಯಾಗಿದ್ದಾನೆ. ಈ ಬಗ್ಗೆ ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






