ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ: ಅಖಾಡಕ್ಕಿಳಿದ ಆರ್ಟಿಓ.. ನೂರಕ್ಕೂ ಹೆಚ್ಚು ಆಟೋಗಳು ಸೀಜ್!

ಬೆಂಗಳೂರು:- ನಗರದಲ್ಲಿ ಆಟೋ ಚಾಲಕರು ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಹೀಗಾಗಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಆಟೋ ಚಾಲಕರಿಗೆ ಆರ್ಟಿಓ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಆಟೋ ಚಾಲಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದ ಹಿನ್ನೆಲೆ ನಗರದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳಿಂದ ಕಾರ್ಯಾಚರಣೆ ಮಾಡಲಾಗಿದೆ. ಈ ವೇಳೆ ನಿಯಮ ಉಲ್ಲಂಘಿಸಿದ 100ಕ್ಕೂ ಅಧಿಕ ಆಟೋಗಳನ್ನು ಸೀಜ್ ಮಾಡಿದ್ದಾರೆ.
ಈ ಕುರಿತಾಗಿ ಸಾರಿಗೆ ಇಲಾಖೆ ಜಂಟಿ ಆಯುಕ್ತೆ ಶೋಭಾ ಅವರು ಪ್ರತಿಕ್ರಿಯಿಸಿದ್ದು, ಸಾರ್ವಜನಿಕರಿಂದ ಆಟೋ ದರ ಹೆಚ್ಚಳ ವಸೂಲಿ ದೂರು ಬಂದಿತ್ತು. ಹೀಗಾಗಿ ಇಂದು ಆಟೋ ದರ ಪರಿಶೀಲನೆ ಮಾಡಲು ಮುಂದಾಗಿದ್ದೇವೆ. ಬೆಳಗ್ಗೆಯಿಂದ ಈವರೆಗೆ ನಗರದಲ್ಲಿ 100ಕ್ಕೂ ಅಧಿಕ ಆಟೋ ಸೀಜ್ ಮಾಡಲಾಗಿದೆ ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






