ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದವರು ಯಾರು ಗೊತ್ತಾ?
ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿರೋದು ಯಾರು ಎಂಬುವುದು ಇದೀಗ ತಿಳಿದು ಬಂದಿದೆ. ಹತ್ತು ದಿನದ ಬಳಿಕ ಕೊನೆಗೂ ನಟ ಉಪೇಂದ್ರ ದಂಪತಿಯ ಮೊಬೈಲ್ ಹ್ಯಾಕ್ ಮಾಡಿದ ಗ್ಯಾಂಗ್ನನ್ನು ಸದಾಶಿವನಗರ ಠಾಣೆ ಪೊಲೀಸ್ರು ಪತ್ತೆ ಹಚ್ಚಿದ್ದಾರೆ
ಮೊಬೈಲ್ ಹ್ಯಾಕ್ ಮಾಡಿರುವ ವಂಚಕರು ಬಿಹಾರ ಮೂಲದವರು ಎನ್ನುವುದು ಗೊತ್ತಾಗಿದೆ. ಬಿಹಾರದಿಂದಲೇ ನಾಲ್ಕೈದು ಜನರಿಂದ ಉಪೇಂದ್ರ ದಂಪತಿಯ ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಹಣ ಕೇಳಿದ್ದಾರೆ.
ಸುಮಾರು 1.65 ಲಕ್ಷ ರೂ. ಹಣ ಪಡೆದುಕೊಂಡು, ನಾಲ್ಕು ಅಕೌಂಟ್ ಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಆ ನಾಲ್ಕು ಅಕೌಂಟ್ ಗಳು ಕೂಡ ನಕಲಿ ಆಗಿರುವುದು ಗೊತ್ತಾಗಿದೆ. ಅದೇ ನಂಬರ್ ಬಳಸಿ, ಅದೇ ದಿನ ತಮಿಳುನಾಡು, ಆಂಧ್ರಪ್ರದೇಶದಲ್ಲೂ ಕೆಲವರ ಮೊಬೈಲ್ ಗಳನ್ನು ಹ್ಯಾಕ್ ಮಾಡಲಾಗಿದೆ. ಸದ್ಯ ಸದಾಶಿವನಗರ ಪೊಲೀಸರು, ಹ್ಯಾಕರ್ಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿದ್ದು, ಬಿಹಾರಕ್ಕೆ ವಿಶೇಷ ತಂಡ ಕಳುಹಿಸಲು ಸಿದ್ದತೆ ನಡೆದಿದೆ.
ನಿಮ್ಮ ಪ್ರತಿಕ್ರಿಯೆ ಏನು?