ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಅಖಾಡಕ್ಕೆ ವೇದಿಕೆ ಸಜ್ಜು! ವಯನಾಡಿನಿಂದ ಕಣಕ್ಕೆ

ಅಕ್ಟೋಬರ್ 16, 2024 - 20:05
 0  11
ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಅಖಾಡಕ್ಕೆ ವೇದಿಕೆ ಸಜ್ಜು! ವಯನಾಡಿನಿಂದ ಕಣಕ್ಕೆ

ನವದೆಹಲಿ: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರೋ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಮತದಾನ ನಡೆಯುತ್ತಿದ್ದ ನವೆಂಬರ್ 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇನ್ನೂ ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ ಅಧಿಕೃತ ಎಂಟ್ರಿಯಾಗಿದ್ದು ಕೇರಳದ ವಯನಾಡಿನಿಂದ ಈ ಬಾರಿ ಕಣಕ್ಕೆ ಇಳಿಯಲಿದ್ದಾರೆ.

ಸಂಸದ ರಾಹುಲ್‌ ಗಾಂಧಿ  ಅವರ ರಾಜೀನಾಮೆಯಿಂದ ತೆರವಾದ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕೆ ಇಳಿಸುವುದಾಗಿ ಎಐಸಿಸಿ (AICC) ಅಧಿಕೃತ ಪ್ರಕಟಣೆಯ ಮೂಲಕ ತಿಳಿಸಿದೆ. ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ನ.13 ರಂದು ನಡೆಯಲಿದ್ದು ನ. 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಜಯಗಳಿಸಿದ ಬಳಿಕ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow