ಫ್ಯಾನ್ಸ್ ಗೆ ಬಿಗ್ ಶಾಕ್: ಸ್ಟಾರ್ ಆಟಗಾರರನ್ನೇ ಕೈ ಬಿಟ್ಟ ರಾಜಸ್ಥಾನ್!

ನವೆಂಬರ್ 1, 2024 - 09:00
 0  19
ಫ್ಯಾನ್ಸ್ ಗೆ ಬಿಗ್ ಶಾಕ್: ಸ್ಟಾರ್ ಆಟಗಾರರನ್ನೇ ಕೈ ಬಿಟ್ಟ ರಾಜಸ್ಥಾನ್!

IPL ಮೆಗಾ ಹರಾಜಿಗೆ ಕೆಲವೇ ದಿನಗಳು ಬಾಕಿ ಇದ್ದು, ಎಲ್ಲಾ ಪ್ರಾಂಚೈಸಿಗಳು ಸ್ಟಾರ್ ಆಟಗಾರರ  ಮೇಲೆ ಕಣ್ಣಿಟ್ಟಿದೆ. ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಆದರೆ ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರಾದ ಜೋಸ್ ಬಟ್ಲರ್, ಟ್ರೆಂಟ್ ಬೌಲ್ಟ್, ರವಿಚಂದ್ರನ್ ಅಶ್ವಿನ್ ಹಾಗೂ ಯುಜ್ವೇಂದ್ರ ಚಹಲ್ ಇಲ್ಲ ಎಂಬುದು ವಿಶೇಷ.

ಉಳಿಸಿಕೊಂಡ ಆಟಗಾರರು, 

ಸಂಜು ಸ್ಯಾಮ್ಸನ್: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ತನ್ನ ಮೊದಲ ರಿಟೈನ್ ಆಗಿ ನಾಯಕ ಸಂಜು ಸ್ಯಾಮ್ಸನ್ ಅವರನ್ನು ಉಳಿಸಿಕೊಂಡಿದೆ. 

ಯಶಸ್ವಿ ಜೈಸ್ವಾಲ್: ಟೀಮ್ ಇಂಡಿಯಾ ಯುವ ಸೆನ್ಸೇಷನ್ ಯಶಸ್ವಿ ಜೈಸ್ವಾಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 14 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. 

ರಿಯಾನ್ ಪರಾಗ್: ಐಪಿಎಲ್ 2024 ರಲ್ಲಿ ಅತ್ಯುತ್ತಮ ಆಲ್​ರೌಂಡರ್ ಆಟದೊಂದಿಗೆ ಮಿಂಚಿರುವ ರಿಯಾನ್ ಪರಾಗ್ ಅವರನ್ನು ಸಹ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತಂಡದಲ್ಲೇ ಉಳಿಸಿಕೊಂಡಿದೆ. 

ಸಂದೀಪ್ ಶರ್ಮಾ: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಬೌಲರ್​ಗಳ ಪಟ್ಟಿಯಲ್ಲಿ ಉಳಿಸಿಕೊಂಡಿರುವುದು ಸಂದೀಪ್ ಶರ್ಮಾ ಅವರನ್ನು. ಡೆತ್ ಬೌಲಿಂಗ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಸಂದೀಪ್ ಅವರನ್ನು ನಾಲ್ಕನೇ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow