ಬಾಣಂತಿಯರ ಸಾವಿನ ಪ್ರಕರಣ: ಕರ್ತವ್ಯ ಲೋಪ ಎಸಗಿದ ಡ್ರಗ್ ಕಂಟ್ರೋಲರ್ ಸಸ್ಪೆಂಡ್- CM ಸ್ಪಷ್ಟನೆ!

ಡಿಸೆಂಬರ್ 1, 2024 - 10:28
 0  6
ಬಾಣಂತಿಯರ ಸಾವಿನ ಪ್ರಕರಣ: ಕರ್ತವ್ಯ ಲೋಪ ಎಸಗಿದ ಡ್ರಗ್ ಕಂಟ್ರೋಲರ್ ಸಸ್ಪೆಂಡ್- CM ಸ್ಪಷ್ಟನೆ!

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚು ಆತಂಕಕ್ಕೀಡು ಮಾಡಿರುವ ಪ್ರಕರಣ ಅಂದ್ರೆ ಅದು ಬಳ್ಳಾರಿ ಬಾಣಂತಿಯರ ಸಾವಿನ ಪ್ರಕರಣ. ಇದೇ ಕೇಸ್ ಗೆ ಸಂಬಧಪಟ್ಟಂತೆ ಕರ್ತವ್ಯ ಲೋಪ ಎಸಗಿದ ಡ್ರಗ್ ಕಂಟ್ರೋಲರ್ ಸಸ್ಪೆಂಡ್ ಮಾಡಲಾಗಿದೆ ಎಂದು CM ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು,ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಕೇಸ್ ನಿಜಕ್ಕೂ ಮನಸ್ಸು ಘಾಸಿ ಮಾಡಿದೆ. ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದರು. 

ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ ಎಂದರು.  

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರಿಸಲಾಗಿದೆ ಎಂದರು. 

ಸಭೆಯಲ್ಲಿ ಮುಖ್ಯಮಂತ್ರಿ ಅವರು ನೀಡಿದ ಸೂಚನೆಗಳು:-

• ನವೆಂಬರ್‌ 11ರಿಂದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿನ ಪ್ರಕರಣ ವರದಿಯಾಗಿದೆ.

•ಹಿಮೋಡಯಾಲಿಸಿಸ್‌ ಮತ್ತು ಬಹು ಅಂಗಗಳ ವೈಫಲ್ಯ ಹಾಗೂ ತೀವ್ರತರ ಮೂತ್ರಪಿಂಡದ ಗಾಯದಂತಹ ತೊಂದರೆಗಳ 7 ಪ್ರಕರಣಗಳಲ್ಲಿ , 4ಬಾಣಂತಿಯರು ಸಾವಿಗೀಡಾಗಿದ್ದಾರೆ.

• ಉಳಿದ 3 ರೋಗಿಗಳಲ್ಲಿ 2 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಳ್ಳಾರಿ ವಿಮ್ಸ್‌ನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

• ಬಾಣಂತಿಯರ ಸಾವಿನ ಕುತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ.

•ಬಾಣಂತಿಯರಿಗೆ ನೀಡಲಾಗಿರುವ ರಿಂಗರ್‌ ಲ್ಯಾಕ್ಟೇಟ್‌ ದ್ರಾವಣದ ಎಲ್ಲಾ ಬ್ಯಾಚ್‌ಗಳ ಬಳಕೆಯನ್ನು ಹಿಂಪಡೆಯಲಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.  

• ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರ. 

ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದರು. 

*

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow