ಬಾಯಿಮುಚ್ಚಿಕೊಂಡು ಕೂರಲು ಬಿಜೆಪಿಯೇನೂ ಕಾಂಗ್ರೆಸ್ ಪಕ್ಷವಲ್ಲ: ಬಿ.ವೈ ವಿಜಯೇಂದ್ರ

ಆಗಸ್ಟ್ 25, 2025 - 16:00
 0  16
ಬಾಯಿಮುಚ್ಚಿಕೊಂಡು ಕೂರಲು ಬಿಜೆಪಿಯೇನೂ ಕಾಂಗ್ರೆಸ್ ಪಕ್ಷವಲ್ಲ: ಬಿ.ವೈ ವಿಜಯೇಂದ್ರ

ಬೆಂಗಳೂರು: ಬಾಯಿಮುಚ್ಚಿಕೊಂಡು ಕೂರಲು ಬಿಜೆಪಿಯೇನೂ ಕಾಂಗ್ರೆಸ್ ಪಕ್ಷವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ  ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಂದೂ ಭಾವನೆಗೆ ಧಕ್ಕೆ ತಂದ ಸರಕಾರದ ಕಿವಿ ಹಿಂಡುವ ಕೆಲಸ ಆಗಬೇಕಿದೆ. ಎನ್‍ಐಎ ತನಿಖೆಯ ಆಗ್ರಹದ ಬೇಡಿಕೆ ಮುಂದಿಟ್ಟು ರಾಜ್ಯದ ಸಮಸ್ತ ಹಿಂದೂ ಸಮಾಜವು ಇದರಲ್ಲಿ ಪಾಲ್ಗೊಳ್ಳಬೇಕು. ಸೆ. 1ರಂದು ಬೃಹತ್ ಸಮಾವೇಶ ಮಾಡಲಿದ್ದೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದೇವರ ಮೇಲೆ ಎಷ್ಟು ನಂಬಿಕೆ ಇದೆ? ಧರ್ಮಸ್ಥಳ ಮಂಜುನಾಥೇಶ್ವರ, ಅಣ್ಣಪ್ಪ ಸ್ವಾಮಿಯ ಬಗ್ಗೆ ಎಷ್ಟು ಶ್ರದ್ಧೆ ಇದೆ? ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಧರ್ಮಸ್ಥಳ ಮಂಜುನಾಥೇಶ್ವರ, ಅಣ್ಣಪ್ಪ ಸ್ವಾಮಿಗೆ ಕೋಟಿ ಕೋಟಿ ಭಕ್ತರಿದ್ದಾರೆ. ಈ ಭಕ್ತರಿಗೆ ಧರ್ಮಸ್ಥಳ ಒಂದು ಪವಿತ್ರ ಶ್ರೀ ಕ್ಷೇತ್ರ; ಧರ್ಮಸ್ಥಳ ಕೇವಲ ಒಂದು ಮಂದಿರವಲ್ಲ; ಹಲವಾರು ದಶಕಗಳಿಂದ ಶ್ರದ್ಧಾಭಾವನೆ ಇದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿದಿರುವುದಾಗಿ ಭಾವಿಸಿದ್ದೇನೆ ಎಂದು ನುಡಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow