ಬಾಲಿವುಡ್ ನಟನಿಗೆ ಚಾಕು ಇರಿತ: ನಟ ಸೈಫ್ ಅಲಿ ಖಾನ್ ಸ್ಥಿತಿ ಗಂಭೀರ! ಮೂವರು ಅರೆಸ್ಟ್!

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈ ಮನೆಯಲ್ಲಿ ದರೋಡೆ ಯತ್ನ ನಡೆದಿದ್ದು, ಈ ವೇಳೆ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ. ಸೈಫ್ ಅಲಿಖಾನ್ ಹಾಗೂ ಕಳ್ಳನ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ನಿರಾಯುಧರಾಗಿದ್ದ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿ ಹಲವು ಬಾರಿ ಚಾಕುವಿನಿಂದ ಇರಿದಿದ್ದಾನೆ. ಇದಾದ ನಂತರ ತಕ್ಷಣ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಕೆಲವೇ ಹೊತ್ತಿನಲ್ಲಿ ನಟನ ನಿವಾಸಕ್ಕೆ ಆಗಮಿಸಿದ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು. ಸೈಫ್ ಅಲಿ ಖಾನ್ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ಪತ್ತೆ ಹಲವು ತಂಡಗಳನ್ನು ರಚಿಸಿ ಮಿಂಚಿನ ಕಾರ್ಯಾಚರಣೆ ನಡೆಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






