ಬಿಗ್ ಬಾಸ್ ವೀಕ್ಷಕರಿಗೆ ಶಾಕ್: ಶೋಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್!

ಬಿಗ್ ಬಾಸ್ ಅಂದ್ರೆ ಸುದೀಪ್. ಸುದೀಪ್ ಅಂದ್ರೆ ಬಿಗ್ ಬಾಸ್. ಎಷ್ಟೋ ಮಂದಿ ಬಿಗ್ ಬಾಸ್ ನೋಡೋದೆ ಸುದೀಪ್ ಗಾಗಿ. ಆದರೆ ಇಂತಹ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಶಾಕ್ ಕೊಟ್ಟಿದ್ದು, ಶೋಗೆ ಗುಡ್ ಬೈ ಹೇಳುತ್ತಿರುವುದನ್ನು ಸ್ವತಹ ಅವರೇ ಬಹಿರಂಗಪಡಿಸಿದ್ದಾರೆ.
ಈ ಹಿಂದೆ ಈ ಬಾರಿ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದು ಅನುಮಾನ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಅಂತಿಮವಾಗಿ ಆಯೋಜಕರು ಹಾಗೂ ಕಲರ್ಸ್ ಕನ್ನಡದ ಮಾತಿಗೆ ಒಪ್ಪಿದ ಕಿಚ್ಚ ಬಿಗ್ ಬಾಸ್ ನಡೆಸಿಕೊಡಲು ಒಪ್ಪಿದ್ದು, ನಿರೂಪಣೆ ಮಾಡುತ್ತಿದ್ದಾರೆ.
ಆದರೆ ಇದೀಗ ಬಿಗ್ ಬಾಸ್ ಸೀಸನ್ -11 ಶುರುವಾದ ಎರಡು ವಾರದಲ್ಲೇ ಕಿಚ್ಚ ಸುದೀಪ್ ನಿರೂಪಣೆಗೆ ಗುಡ್ ಬೈ ಹೇಳಿದ್ದಾರೆ. ಇದು ನಿರೂಪಕನಾಗಿ ನನ್ನ ಕೊನೆಯ ಬಿಗ್ ಬಾಸ್ ಸೀಸನ್ ಎಂದು ಕಿಚ್ಚ ಹೇಳಿದ್ದಾರೆ. ಈ ಬಗ್ಗೆ ‘ಎಕ್ಸ್’ ನಲ್ಲಿ ಅವರು ಬರೆದುಕೊಂಡಿದ್ದಾರೆ.
ಬಿಗ್ ಬಾಸ್ ಕಾರ್ಯಕ್ರಮಕ್ಕೆ ಸಿಕ್ಕ ಉತ್ತಮ ಪ್ರತಿಕ್ರಿಯೆ ಬಗ್ಗೆ ಕಿಚ್ಚ ಸುದೀಪ್ ಮಾಡಿದ ಟ್ವೀಟ್ ಇದೀಗ ಫುಲ್ ವೈರಲ್ ಆಗ್ತಿದೆ. BBK11 ಗೆ ತೋರಿದ ಉತ್ತಮ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು. ಕಾರ್ಯಕ್ರಮ ಟಿವಿಆರ್ ಮತ್ತು ನನ್ನ ಬಗ್ಗೆ ನೀವೆಲ್ಲರೂ ತೋರಿದ ಪ್ರೀತಿಯನ್ನು ವಿವರಿಸಲು ಆಗಲ್ಲ
10+1 ವರ್ಷಗಳ ಪ್ರಯಾಣ ನನ ಪಾಲಿಗೆ ಬೆಸ್ಟ್ ಆಗಿದೆ. ಮುಂದೆ ಸಾಗಿ ನಾನು ಏನು ಮಾಡಬೇಕೆಂಬುದನ್ನು ತಿಳಿಯುವ ಸಮಯವಾಗಿದೆ. ಇದು BBK ಗೆ ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ. ನನ್ನ ನಿರ್ಧಾರವನ್ನು ನನ್ನ ಕಲರ್ಸ್ ಹಾಗೂ ಹಲವು ವರ್ಷಗಳಿಂದ ಬಿಗ್ ಬಾಸ್ ಫಾಲೋ ಮಾಡ್ತಿರುವ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಂಬುತ್ತೇನೆ ಎಂದು ಸುದೀಪ್ ಟ್ವೀಟ್ನಲ್ಲಿ ಬರೆದಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






