ಬಿಜೆಪಿಗೆ ಬಿಗ್ ಶಾಕ್: ಮರಳಿ "ಕೈ" ಹಿಡಿದ ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ!

ಫೆಬ್ರವರಿ 16, 2025 - 16:19
 0  28
ಬಿಜೆಪಿಗೆ ಬಿಗ್ ಶಾಕ್: ಮರಳಿ "ಕೈ" ಹಿಡಿದ ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ!

ಬೆಂಗಳೂರು:- ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಮರಳಿ "ಕೈ" ಪಕ್ಷ ಸೇರಿದ್ದಾರೆ. 

ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಾಜಿ ಸಂಸದ, ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು ಎಲ್.ಎಸ್.ಚೇತನ್ ಗೌಡ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು. ಎಲ್.ಆರ್. ಶಿವರಾಮೇಗೌಡ ಅವರ ಬೆಂಬಲಿಗರೂ ಕೂಡ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರಿದ್ದಾರೆ.

ಎಲ್ಆರ್ ಶಿವರಾಮೇಗೌಡ ಅವರು ಇತ್ತೀಚಿಗೆ ಬಿಜೆಪಿ ಸೇರಿದ್ದರು. ಇದೀಗ ಮರಳಿ ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದ ಬ್ರಿಜೇಶ್ ಕಾಳಪ್ಪ ಕೂಡ ಮರಳಿ ಮಾತೃ ಪಕ್ಷಕ್ಕೆ ವಾಪಸ್ ಆಗಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow