ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ವಿಜಯೇಂದ್ರ ಬದಲಾವಣೆಯಾಗಬೇಕು: ಕುಮಾರ್ ಬಂಗಾರಪ್ಪ!

ಜೂನ್ 23, 2025 - 14:22
 0  24
ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ವಿಜಯೇಂದ್ರ ಬದಲಾವಣೆಯಾಗಬೇಕು: ಕುಮಾರ್ ಬಂಗಾರಪ್ಪ!

ಬೆಂಗಳೂರು:- ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ವಿಜಯೇಂದ್ರ ಬದಲಾವಣೆಯಾಗಬೇಕು ಎಂದು ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಮುಂದುವರೆಯಬಾರದು ಎನ್ನುವ ನಿಲುವಿನಲ್ಲಿ ಈಗಲೂ ನಾವಿದ್ದೇವೆ. 

ವಿಜಯೇಂದ್ರ ಮುಂದುವರೆಯಬಾರದು ಎನ್ನುವುದು ನಮ್ಮ ನಿಲುವು. ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕಾದರೆ ವಿಜಯೇಂದ್ರ ಬದಲಾವಣೆಯಾಗಬೇಕು. ನಮ್ಮ ಅಭಿಪ್ರಾಯ ಹೇಳಿದ್ದೇವೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ನೋಡೋಣ. ನಮ್ಮ ಅಭಿಪ್ರಾಯ, ನಮ್ಮ ನಿಲುವನ್ನು ನಾವು ಹೇಳಿದ್ದೇವೆ. ಕರ್ನಾಟಕದ ಕಾರ್ಯಕರ್ತರಿಗೂ ಈ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು ಎನ್ನುವ ಭಾವನೆಯಿದೆ. ನಮ್ಮ ಬೇಡಿಕೆಯಿಂದ ನಾವು ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸರ್ಕಾರದ ಅಕ್ರಮಗಳು ಜಾಸ್ತಿಯಾಗಿವೆ. ಇದರ ವಿರುದ್ಧ ಧ್ವನಿ ಎತ್ತುವ ಕೆಲಸ ವಿಜಯೇಂದ್ರ ಮಾಡಿಲ್ಲ. ವಾಲ್ಮೀಕಿ ಹಗರಣವನ್ನು ಹಾಗೆಯೇ ಕೈ ಬಿಟ್ಟರು. ಹನಿಟ್ರ‍್ಯಾಪ್ ವಿಷಯವನ್ನು ಬಿಟ್ಟರು. ಹೊಂದಾಣಿಕೆ ಮಾಡಿಕೊಂಡು ಕೈ ಚೆಲ್ಲಿ ಕೂತರೆ ಹೇಗೆ? ಇವರೆಲ್ಲ ನೇರ ನಡೆಯಿಂದ ರಾಜಕೀಯ ಮಾಡುತ್ತಿಲ್ಲ. ಒಳಒಪ್ಪಂದ ಮಾಡಿ ರಾಜಕೀಯ ಮಾಡುತ್ತಿದ್ದಾರೆ. ಈಗಿನ ಅಧ್ಯಕ್ಷರು ಇದನ್ನೆಲ್ಲ ಮಾಡ್ತಿದ್ದಾರೆ. ಈ ಕುರಿತು ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಂಡಿದ್ದೇವೆ ಎಂದು ಹೆಸರು ಹೇಳದೇ ವಿಜಯೇಂದ್ರ ಒಳಒಪ್ಪಂದ ಮಾಡ್ತಿದ್ದಾರೆ ಎಂದು ಆರೋಪಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow