ಬಿಜೆಪಿ ಅವಧಿಯಲ್ಲಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ: ಸಿಎಂ ಸಿದ್ದರಾಮಯ್ಯ

ಸಂಡೂರು: ಬಿಜೆಪಿ ಅವಧಿಯಲ್ಲಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲೀನಿಕ್ ಗಳು ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲವೂ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ಮಾತ್ರ. ಬಿಜೆಪಿ ಅವಧಿಯಲ್ಲಿ ಲೂಟಿ ಲೂಟಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ ಎಂದರು.
ಇನ್ನೂ ನಾನು ಮುಖ್ಯಮಂತದರಿಯಾಗಿ 5000 ಕೋಟಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿದೆ. 371 ಜೆ ಬಂದಿದ್ದರಿಂದ ಇಲ್ಲಿನ ಮಕ್ಕಳು ಎಂಜಿನಿಯರ್ ಗಳಾದರು. ಡಾಕ್ಟರ್ ಗಳಾದರು. ಸರ್ಕಾರಿ ಕೆಲಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸೇರಲು ಅವಕಾಶವಾಯಿತು ಎಂದರು.
ಈಗ ಅವರು ಅಕ್ರಮ ಗಣಿಗಾರಿಕೆಯ ಹಣದ ಚೀಲಗಳನ್ನು ಹೊತ್ತುಕೊಂಡು ಬಂದು ಕುಳಿತಿದ್ದಾರೆ. ಅವರ ಹಣಕ್ಕೆ ಮರುಳಾಗುತ್ತೀರಾ ? ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಭಾಗ್ಯದ ಬಾಗಿಲು ತೆರೆದ ಕಾಂಗ್ರೆಸ್ ಕೈ ಹಿಡಿಯುತ್ತೀರಾ ಪ್ರಾಮಾಣಿಕವಾಗಿ ಯೋಚಿಸಿ ನಿರ್ಧರಿಸಿ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






