ಬಿಜೆಪಿ ಕೋವಿಡ್ ಹಗರಣ: ಯಡಿಯೂರಪ್ಪ, ರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ! ಬಿಜೆಪಿ ಮುಂದಿನ ನಡೆ!?

ಬೆಂಗಳೂರು:-ಕೊರೊನಾ ಹಗರಣ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ಗೆ ಆಯೋಗ ಶಿಫಾರಸು ಮಾಡಿದೆ.
ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ನ್ಯಾ.ಮೈಕಲ್ ಡಿ ಕುನ್ನಾ ವರದಿ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಅಂದಿನ ಸರ್ಕಾರ ಚೀನಾ ಕಂಪನಿಗಳಿಂದ ಪಿಪಿಇ ಕಿಟ್ ಖರೀದಿ ಮಾಡಿತ್ತು. ಪಿಪಿಇ ಕಿಟ್ ಖರೀದಿ ವೇಳೆ ದರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ದರ ವ್ಯತ್ಯಾಸದಿಂದ ಪಿಪಿಇ ಕಿಟ್ ಪೂರೈಕೆದಾರರಿಗೆ 14.21 ಕೋಟಿ ರೂ. ಲಾಭವಾಗಿದೆ. ಪೂರೈಕೆದಾರರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಅಕ್ರಮ ಎಸಗಲಾಗಿದೆ ಎಂದು ವರದಿಯಲ್ಲಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದಲ್ಲಿ ಆಗಸ್ಟ್ 25, 2023ರಲ್ಲಿ ರಚನೆಯಾಗಿದ್ದ ತನಿಖಾ ಆಯೋಗ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಒಟ್ಟು 769 ಕೋಟಿ ರೂ. ಅವ್ಯವಹಾರ ನಡೆದಿರುವುದು ಪತ್ತೆ ಮಾಡಿದೆ.
ಚೀನಾದ ಸಂಸ್ಥೆಗಳಿಂದ 3 ಲಕ್ಷ ಪಿಪಿಇ ಕಿಟ್ಗಳನ್ನು ನೇರವಾಗಿ ಖರೀದಿಸುವ ಕುರಿತು ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದರು. ಎರಡು ಚೀನಾ ಸಂಸ್ಥೆಗಳಿಂದ ಪಿಪಿಇ ಕೆಟ್ಗಳನ್ನು ದುಬಾರಿ ದರದಲ್ಲಿ ಕೊಂಡುಕೊಳ್ಳಲಾಗಿದೆ ಎಂದು ಬಯಲಾಗಿದೆ
ನಿಮ್ಮ ಪ್ರತಿಕ್ರಿಯೆ ಏನು?






