ಬಿಜೆಪಿ-ಜೆಡಿಎಸ್ ಮೈತ್ರಿಗೆ ಬಿಗ್ ಶಾಕ್: ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಯೋಗೇಶ್ವರ್

ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಮೂಲಕ ಯೋಗೇಶ್ವರ್, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ನಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ.
ವಾಟ್ಸಾಪ್ ಮೂಲಕ ರಾಜೀನಾಮೆ ಪತ್ರವನ್ನು ರವಾನಿಸಿದ್ದು, ಈ ದಿನ ನಾನು ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆ ಸ್ವೀಕರಿಸಬೇಕೆಂದು ಕೋರುತ್ತೇನೆ. ಇಲ್ಲಿಯವರೆಗೆ ನನಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಬಳಿಕ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.
ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದರು. ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿದ್ದರು. ಸಿಪಿ ಯೋಗೇಶ್ವರ್ ಅವರನ್ನು ಜೆಡಿಎಸ್ನಿಂದಲೇ ಸ್ಪರ್ಧೆ ಮಾಡಿಸಲು ಬಿಜೆಪಿ ಮುಂದಾಗಿತ್ತು. ಬಿಜೆಪಿ ರಾಷ್ಟ್ರೀಯ ನಾಯಕರ ಮೂಲಕ ಯೋಗೇಶ್ವರ್ ಮನವೊಲಿಕೆಗೆ ಜೆಡಿಎಸ್ ಸಹ ಕಸರತ್ತು ನಡೆಸಿತ್ತು.
ನಿಮ್ಮ ಪ್ರತಿಕ್ರಿಯೆ ಏನು?






