ಬುಮ್ರಾ ಫೈಯರ್: ದಿಗ್ಗಜರ ಶ್ರೇಷ್ಟ ದಾಖಲೆಗಳೆಲ್ಲಾ ಉಡೀಸ್!

ನವೆಂಬರ್ 24, 2024 - 10:08
 0  13
ಬುಮ್ರಾ ಫೈಯರ್: ದಿಗ್ಗಜರ ಶ್ರೇಷ್ಟ ದಾಖಲೆಗಳೆಲ್ಲಾ ಉಡೀಸ್!

ಬಾರ್ಡರ್ ಗವಾಸ್ಕರ್​ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಅವರು ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. 

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ ನಾಯಕತ್ವವನ್ನು ಬುಮ್ರಾ ವಹಿಸಿಕೊಂಡಿದ್ದಾರೆ. ಹೀಗಾಗಿ ನಾಯಕತ್ವದ ಜೊತೆಗೆ ಬೌಲಿಂಗ್ ವಿಭಾಗವನ್ನು ಮುನ್ನಡೆಸುವ ಜವಬ್ದಾರಿ ಬುಮ್ರಾ ಮೇಲಿತ್ತು. ಈ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ಬುಮ್ರಾ, ಮೊದಲ ದಿನ 10 ಓವರ್‌ಗಳಲ್ಲಿ ಕೇವಲ 17 ರನ್ ನೀಡಿ 4 ವಿಕೆಟ್ ಪಡೆದರು.

ಈ ಮೂಲಕ ಬುಮ್ರಾ, ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದ ಭಾರತದ ಬೌಲರ್​ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ತಲುಪಿದ್ದಾರೆ. ಬುಮ್ರಾ ಆಸ್ಟ್ರೇಲಿಯಾ ನೆಲದಲ್ಲಿ ಎಂಟನೇ ಟೆಸ್ಟ್ ಆಡುತ್ತಿದ್ದು ಇದುವರೆಗೆ 35 ವಿಕೆಟ್ ಪಡೆದಿದ್ದಾರೆ.

ಇದರೊಂದಿಗೆ ಅವರು ಆಸ್ಟ್ರೇಲಿಯಾದಲ್ಲಿ 35 ಟೆಸ್ಟ್ ವಿಕೆಟ್‌ಗಳನ್ನು ಪಡೆದ ಮಾಜಿ ಸ್ಪಿನ್ನರ್ ಬಿಷನ್ ಸಿಂಗ್ ಬೇಡಿ ಅವರ ದಾಖಲೆಯನ್ನು ಮುರಿದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಕಪಿಲ್ ದೇವ್ (51 ವಿಕೆಟ್), ಅನಿಲ್ ಕುಂಬ್ಳೆ (49 ವಿಕೆಟ್) ಮತ್ತು ರವಿಚಂದ್ರನ್ ಅಶ್ವಿನ್ (39 ವಿಕೆಟ್) ಮಾತ್ರ ಅವರಿಗಿಂತ ಮುಂದಿದ್ದಾರೆ.

ಇದಲ್ಲದೆ ಆಸೀಸ್ ಬ್ಯಾಟಿಂಗ್ ವಿಭಾಗದ ಮೊದಲ 3 ವಿಕೆಟ್ಗಳನ್ನು ಉರುಳಿಸಿದ ಜಸ್ಪ್ರೀತ್ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆದಿದ್ದು, ಡೇಲ್ ಸ್ಟೇನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಬುಮ್ರಾ, ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರನ್ನು ಗೋಲ್ಡನ್ ಡಕ್‌ಗೆ ಔಟ್ ಮಾಡಿದರು. ಇದರೊಂದಗೆ ಈ ಸಾಧನೆ ಮಾಡಿದ ವಿಶ್ವದ ಎರಡನೇ ಬೌಲರ್ ಎನಿಸಿಕೊಂಡರು. ಬುಮ್ರಾಗೂ ಮೊದಲು ಡೇಲ್ ಸ್ಟೇನ್ ಮಾತ್ರ ಸ್ಮಿತ್‌ರನ್ನು ಗೋಲ್ಡನ್ ಡಕ್‌ಗೆ ಹೊರಹಾಕಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow