ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ರೇ**ಪ್: ಕಾಲೇಜಿನ ವಾಶ್ ರೂಮ್‌ʼಗೆ ಎಳೆದೊಯ್ದು ಕೃತ್ಯ

ಅಕ್ಟೋಬರ್ 17, 2025 - 12:00
 0  24
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ರೇ**ಪ್: ಕಾಲೇಜಿನ ವಾಶ್ ರೂಮ್‌ʼಗೆ ಎಳೆದೊಯ್ದು ಕೃತ್ಯ

ಬೆಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಹನುಮಂತನಗರ ಠಾಣೆ ಪೊಲೀಸರು ಆರೋಪಿ ಜೀವನ್ ಗೌಡ ಎಂಬ ಯುವಕನನ್ನು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಅಕ್ಟೋಬರ್ 10ರಂದು ಬೆಳಿಗ್ಗೆ 8.55ರ ಸುಮಾರಿಗೆ ತರಗತಿಗೆ ಹಾಜರಾದ ವಿದ್ಯಾರ್ಥಿನಿ ಲಂಚ್ ಸಮಯದಲ್ಲಿ ಸಹಪಾಠಿ ಜೀವನ್ ಗೌಡನನ್ನು ಭೇಟಿಯಾಗಿದ್ದಾಳೆ. ಅಲ್ಲಿ ಸ್ವಲ್ಪ ಮಾತನಾಡಬೇಕೆಂದು ಹೇಳಿ ಆರೋಪಿಯು ಆಕೆಯನ್ನು ಡೌನ್ ಸ್ಪೇರ್ಸ್‌ಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ 7ನೇ ಮಹಡಿಯ ಪಿಜಿ ಬ್ಲಾಕ್‌ಗೆ ಹೋಗಿ ಆಕೆಗೆ ಕಿಸ್ ಮಾಡಲು ಯತ್ನಿಸಿದಾಗ, ವಿದ್ಯಾರ್ಥಿನಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ.

ಆದರೆ ಆರೋಪಿ ಆಕೆಯನ್ನು ಹಿಂಬಾಲಿಸಿ 6ನೇ ಮಹಡಿಗೆ ಹೋಗಿ ಪುರುಷರ ಕಾಲೇಜ್ ವಾಶ್ ರೂಂಗೆ ಎಳೆದೊಯ್ದು ಬಲವಂತವಾಗಿ ಬಾಗಿಲು ಲಾಕ್ ಮಾಡಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯಿಂದ ಆಘಾತಗೊಂಡ ವಿದ್ಯಾರ್ಥಿನಿ ಈ ವಿಷಯವನ್ನು ತನ್ನ ಆಪ್ತ ಸ್ನೇಹಿತರಿಗೆ ತಿಳಿಸಿದ್ದಾಳೆ. ಅವರ ಸಲಹೆ ಮೇರೆಗೆ ಆಕೆಯ ಪೋಷಕರು ಮತ್ತು ಆಕೆ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ಹನುಮಂತನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow