ಬೆಂಗಳೂರು ಕಾಲ್ತುಳಿತ ಕೇಸ್: KSCA ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ!

ಜೂನ್ 6, 2025 - 18:27
 0  13
ಬೆಂಗಳೂರು ಕಾಲ್ತುಳಿತ ಕೇಸ್: KSCA ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ದುರದೃಷ್ಟಕರ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್ಸಿಎ) ಅಧಿಕಾರಿಗಳು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ಸಂಸ್ಥೆ (ಕೆಎಸ್ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ಏಕಸದಸ್ಯ ಪೀಠವು ಶುಕ್ರವಾರ ಮಧ್ಯಂತರ ಆದೇಶ ಹೊರಡಿಸಿದೆ.

ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕೆಎಸ್ಸಿಎ ಆಡಳಿತ ಮಂಡಳಿ ಮತ್ತು ಅದರ ಉನ್ನತ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಅಧಿಕಾರಿಗಳಿಗೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ಅನುಮತಿ ನೀಡಿದೆ.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರು, ಕೆಎಸ್ಸಿಎ ಆಡಳಿತ ಮಂಡಳಿಯ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ . ಶಂಕರ್ ಮತ್ತು ಖಜಾಂಚಿ .ಎಸ್.ಜೈರಾಮ್ ಅವರಿಗೆ ಮಧ್ಯಂತರ ಪರಿಹಾರ ನೀಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸುವಂತೆ ಸೂಚನೆ ನೀಡಿದ್ದಾರೆ.

ಹಕ್ಕುಗಳು ಮತ್ತು ವಾದಗಳಿಗೆ ಯಾವುದೇ ಪೂರ್ವಾಗ್ರಹವಿಲ್ಲದೆ, ಮುಂದಿನ ವಿಚಾರಣೆಯ ದಿನಾಂಕದವರೆಗೆ ಅರ್ಜಿದಾರರು ನಡೆಯುತ್ತಿರುವ ತನಿಖೆ, ವಿಚಾರಣೆ, ಆಯೋಗ ಇತ್ಯಾದಿಗಳಿಗೆ ಸಹಕರಿಸಬೇಕು ಎಂದು ಕೋರ್ಟ್ತಿಳಿಸಿದೆ.ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಶಶಿ ಕಿರಣ್, ತನಿಖೆ ಮುಂದುವರಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಆದರೆ, ಅರ್ಜಿದಾರರ ಪರ ವಕೀಲರು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಮಾರ್ಕೆಟಿಂಗ್ ಮುಖ್ಯಸ್ಥರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಕೋರ್ಟ್ ಗಮನ ಸೆಳೆದರು. ಒಬ್ಬ ಆರೋಪಿಯನ್ನು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು. ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ. ಆತ ದುಬೈಗೆ ಹೋಗುತ್ತಿದ್ದ ಎಂದು ಎಜಿ ತಿಳಿಸಿದರು.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow