ಬೆಂಗಳೂರು ಸೇರಿದಂತೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ: ಭಾರೀ ಮಳೆಯ ಸಾಧ್ಯತೆ

ಅಕ್ಟೋಬರ್ 12, 2025 - 10:29
 0  11
ಬೆಂಗಳೂರು ಸೇರಿದಂತೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ: ಭಾರೀ ಮಳೆಯ ಸಾಧ್ಯತೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ 14 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ (Yellow Alert) ಘೋಷಿಸಿದೆ. ಅಕ್ಟೋಬರ್ 13ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಭೂ ಕುಸಿತದ ಎಚ್ಚರಿಕೆ ನೀಡಲಾಗಿದೆ.

ನಿನ್ನೆ ಸುರಿದ ಮಳೆಯಿಂದ ಬೆಂಗಳೂರಿನ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಇಂದು ಕೂಡ ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 15ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಹಳದಿ ಎಚ್ಚರಿಕೆ ನೀಡಲಾದ ಜಿಲ್ಲೆಗಳು: ದಕ್ಷಿಣ ಕನ್ನಡ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಾಮರಾಜನಗರ.

ಈ ಜಿಲ್ಲೆಗಳಲ್ಲಿ 10 ಮಿ.ಮೀ.ದಿಂದ 30 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಭೂ ಕುಸಿತ ಉಂಟಾಗುವ ಸಾಧ್ಯತೆಗಳೂ ಇವೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow