ಬೆಳಗಾವಿಯ ಬಿಮ್ಸ್ʼನಲ್ಲಿ ಮತ್ತೊಬ್ಬ ಬಾಣಂತಿ ಸಾವು..! ಅನಾಥವಾಯ್ತು ಕಂದಮ್ಮ

ಜನವರಿ 28, 2025 - 12:03
 0  10
ಬೆಳಗಾವಿಯ ಬಿಮ್ಸ್ʼನಲ್ಲಿ ಮತ್ತೊಬ್ಬ ಬಾಣಂತಿ ಸಾವು..! ಅನಾಥವಾಯ್ತು ಕಂದಮ್ಮ

ಬೆಳಗಾವಿ: ರಾಜ್ಯದಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಬೆಳಕಿಗೆ ಬಂದ ಬಳಿಕ ರಾಜ್ಯದ ಹಲವೆಡೆ ನಿರಂತರವಾಗಿ ಪ್ರಕರಣಗಳು ವರದಿಯಾಗುತ್ತಿವೆ. ಕೆಲ ದಿನಗಳ ಹಿಂದೆ ಕಲಬುರಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಾಣಂತಿಯರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾಳೆ.

ಹೌದು ರಾಜ್ಯದಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಮುಂದುವರೆದಿದೆ. ಬಿಮ್ಸ್​ನಲ್ಲಿ ನಿನ್ನೆ ರಾತ್ರಿ ಸಿಜರಿನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದ ಅಂಜಲಿ ಪಾಟೀಲ್‌ (31) ಇಂದು ಮುಂಜಾನೆ ಸಾವಿಗೀಡಾಗಿದ್ದಾರೆ. ಮದುವೆಯಾಗಿ 12 ವರ್ಷದ ಬಳಿಕ ಗರ್ಭಿಣಿಯಾಗಿದ್ದ ಅಂಜಲಿ ಪಾಟೀಲ್ ಮಗುವಿಗೆ ಜನ್ಮ ನೀಡಿದ ಬಳಿಕ ಮೃತರಾಗಿದ್ದಾರೆ.

ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ಅಂಜಲಿ ಪಾಟೀಲ್ ಅವರಿಗೆ ಹೆರಿಗೆ ‌ದಿನಾಂಕ ನೀಡಲಾಗಿತ್ತು. ಹೆರಿಗೆ ನೋವು ಕಾಣಿಸದ ಹಿನ್ನೆಲೆ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ಬಳಿಕ ಬಾಣಂತಿ ಮೃತಪಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವೈದ್ಯರ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ.

ಕಳೆದ 12 ವರ್ಷಗಳ ಹಿಂದೆ ನಿಲಜಿ ಗ್ರಾಮದ ಪೇಂಟಿಂಗ್ ಕೆಲಸ ಮಾಡುತ್ತಿದ್ದ ನಿಂಗಾಣಿ ಪಾಟೀಲ ಜೊತೆಗೆ ಅಂಜಲಿ ಅವರ ವಿವಾಹವಾಗಿತ್ತು. 12 ವರ್ಷಗಳ ಬಳಿಕ ಗರ್ಭಿಣಿ ಆಗಿದ್ದ ಅಂಜಲಿ ಅವರು ಮೊದಲ ಮಗುವಿಗೆ ಜನ್ಮ ನೀಡಿ ಕಣ್ಮುಚ್ಚಿದ್ದಾರೆ. ಶವಾಗಾರದ ಎದುರು ಮೃತ ಮಹಿಳೆಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಬಿಮ್ಸ್ ನಿರ್ದೇಶಕ ಡಾ. ಅಶೋಕಕುಮಾರ್ ಶೆಟ್ಟಿ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow