ಬೆಳ್ಳಂ ಬೆಳಗ್ಗೆ ಪೊಲೀಸ್ ಬಂದೂಕು ಸದ್ದು: ದರೋಡೆ ಆರೋಪಿಗಳಿಗೆ ಗುಂಡೇಟು

ಮಾರ್ಚ್ 15, 2025 - 11:59
 0  10
ಬೆಳ್ಳಂ ಬೆಳಗ್ಗೆ ಪೊಲೀಸ್ ಬಂದೂಕು ಸದ್ದು: ದರೋಡೆ ಆರೋಪಿಗಳಿಗೆ ಗುಂಡೇಟು

ಹುಬ್ಬಳ್ಳಿ: ಸಭಾಪತಿ ಬಸವರಾಜ್ ಹೊರಟ್ಟಿಯವರ ಹುಬ್ಬಳ್ಳಿಯ ನಿವಾಸದ ಬಳಿ ಆರೋಪಿಗಳು ದರೋಡೆ ಮಾಡಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ಮೇಲೆ ಗುಂಡು ಹೊಡೆದು ಬಂಧಿಸಿದ್ದಾರೆ. ಅಂತರರಾಜ್ಯ ಕಳ್ಳರಾದ ಇರ್ಷಾದ್ ಹಾಗೂ ಅಕ್ಬರ್ ಕಾಲಿಗೆ ಹುಬ್ಬಳ್ಳಿಯ ಉಪನಗರ ಪೊಲೀಸರು ಗುಂಡು ಹಾರಿಸಿದ್ದಾರೆ.

 ಸಭಾಪತಿ ಬಸವರಾಜ್ ಹೊರಟ್ಟಿಯವರ ಹುಬ್ಬಳ್ಳಿಯ ನಿವಾಸದ ಬಳಿ ಆರೋಪಿಗಳು ದರೋಡೆ ಮಾಡಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ.

ಕಾರ್ಯಾಚರಣೆ ವೇಳೆ, ಮೂವರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ. ಪೊಲೀಸರಿಂದ ಗುಂಡೇಟು ತಿಂದ ಆರೋಪಿಗಳನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow