ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ: ಮೂವರು ಸಾವು, ಇಬ್ಬರು ಗಂಭೀರ
ಬೆಂಗಳೂರು: ಇಂದು ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭಂವಿಸಿದ್ದು, ನಗರದ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಟ್ರಕ್, ಕಾರು ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂರು ಜನ ಸಾವಿಗೀಡಾಗಿದ್ದು, ಗಾಯಗೊಂಡ ಇಬ್ಬರ ಸ್ಥಿತಿ ಗಂಭಿರವಾಗಿದೆ.
ಆಟೋದಲ್ಲಿದ್ದ ಯೇಸು.ಡಿ ಮತ್ತು ಜೆನ್ನಿಫರ್ ಸಾವನ್ನಪ್ಪಿದ್ದಾರೆ. ಅಡ್ಡದಾರಿಯಿಂದ ಬಂದ ಟ್ರಕ್ ಸುಮ್ಮನಹಳ್ಳಿ ರಸ್ತೆಗೆ ಇಳಿದಾಗ ಬ್ರೇಕ್ ಫೇಲ್ ಆಗಿ ಮುಂದೆ ಇದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾಗಿದೆ. ಇದರಿಂದ ಈ ಅಪಘಾತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಆಟೋ ಎರಡು ತುಂಡಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಬ್ರೇಕ್ ಫೇಲ್ ಆಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?