ಬ್ಯಾಂಕ್ ಆಫ್ ಬರೋಡಾದಲ್ಲಿ 4000 ಹುದ್ದೆಗಳಿಗೆ ಅರ್ಜಿ ಆಹ್ವಾನ..! ಆಸಕ್ತರು ಅಪ್ಲೈ ಮಾಡಿ!

ಮಾರ್ಚ್ 11, 2025 - 08:08
 0  10
ಬ್ಯಾಂಕ್ ಆಫ್ ಬರೋಡಾದಲ್ಲಿ 4000 ಹುದ್ದೆಗಳಿಗೆ ಅರ್ಜಿ ಆಹ್ವಾನ..! ಆಸಕ್ತರು ಅಪ್ಲೈ ಮಾಡಿ!

ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಬ್ಯಾಂಕ್​ ಆಫ್​ ಬರೋಡ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕ್​ ಆಫ್​ ಬರೋಡಾದಲ್ಲಿ 4000 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ನೇಮಕಾತಿ ನಡೆಯಲಿದೆ. ನಾಲ್ಕು ವರ್ಷದ ಅವಧಿಗೆ ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 4000 ಹುದ್ದೆಗಳು. ಕರ್ನಾಟಕದಲ್ಲಿ 537 ಹುದ್ದೆಗಳ ಭರ್ತಿ.

ವಿದ್ಯಾರ್ಹತೆ: ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು.ವಯೋಮಿತಿ:ಕನಿಷ್ಠ 20 ಹಾಗೂ ಗರಿಷ್ಠ 28 ವರ್ಷ ವಯೋಮಿತಿ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: ಮಾಸಿಕ ₹12 ಸಾವಿರದಿಂದ ₹15 ಸಾವಿರ ರೂ ಗೌರವಧನ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಸಾಮಾನ್ಯ, ಒಬಿಸಿ, ಇಡಬ್ಲ್ಯುಸಿ ಅಭ್ಯರ್ಥಿಗಳಿಗೆ 800 ರೂ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 600 ರೂ, ವಿಶೇಷಚೇತನ ಅಭ್ಯರ್ಥಿಗಳಿಗೆ 400 ರೂ ಅರ್ಜಿ ಶುಲ್ಕವಿದೆ

ಅಭ್ಯರ್ಥಿಗಳನ್ನು ಆನ್​ಲೈನ್​ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆ ಮೇಲೆ ಆಯ್ಕೆ ಮಾಡಲಾಗುತ್ತದೆ. ಮಾ.11  ಅರ್ಜಿ ಸಲ್ಲಿಸಲು ಕಡೆಯ ದಿನ. ಈ ಕುರಿತು ಹೆಚ್ಚಿನ ವಿವರಗಳಿಗೆ bankofbaroda.in ಇಲ್ಲಿಗೆ ಭೇಟಿ ನೀಡಿ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow