ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸೋದು ತಪ್ಪೇನು ಇಲ್ಲ: ಡಿಸಿಎಂ ಡಿಕೆಶಿ

ಸೆಪ್ಟೆಂಬರ್ 12, 2025 - 09:30
ಸೆಪ್ಟೆಂಬರ್ 11, 2025 - 18:14
 0  12
ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸೋದು ತಪ್ಪೇನು ಇಲ್ಲ: ಡಿಸಿಎಂ ಡಿಕೆಶಿ

ಬೆಂಗಳೂರು:- ಜಿಬಿಎ ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲಿ ನಡೆಸುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಬಿಎ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲೆಟ್ ಪೇಪರ್ ಮೂಲಕ ನಡೆಸೋದು ತಪ್ಪೇನು ಇಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಅವರೇ ಬ್ಯಾಲೆಟ್‌ನಲ್ಲಿ ಚುನಾವಣೆ ಮಾಡಬೇಕು ಎಂದು ಕಾನೂನು ಮಾಡಿದ್ದರು. ಎಲೆಕ್ಷನ್ ಕಮೀಷನ್‌ನಲ್ಲಿಯೂ ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ಮಾಡೋಕೆ ಅವಕಾಶ ಇದೆ. ಅದು ಅವರಿಗೆ ಬಿಟ್ಟ ವಿಚಾರ. ಜಿಬಿಎ ಆಕ್ಟ್ ಮಾಡೋವಾಗ ನಾನು ವಾಪಸ್ ತಂದಿದ್ದೇನೆ ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲಿ ಮಾಡೋದು ತಪ್ಪೇನು ಅಲ್ಲ. ಕಾನೂನು ಸಚಿವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಚುನಾವಣೆ ಆಯೋಗ ಯಾವುದಕ್ಕೆ ಸಿದ್ಧವಾಗಿದೆಯೋ ಅದರಂತೆ ನಾವು ನಡೆಸುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಗೃಹ ಸಚಿವ ಪರಮೇಶ್ವರ್ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಅದರ ಬಗ್ಗೆ ಗೊತ್ತಿಲ್ಲ. ಈಗಷ್ಟೇ ಮಾಧ್ಯಮದವರು ಹೇಳಿದರು. ಆ ವಿಷಯ ಏನು ಅಂತ ಗೊತ್ತಿಲ್ಲ, ತಿಳಿದುಕೊಂಡು ಮಾತಾಡ್ತೀನಿ ಎಂದರು

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow