ಭರ್ಜರಿ ಗೆಲುವಿನ ಬೆನ್ನಲ್ಲೇ RCBಗೆ ಶಾಕ್: ತಂಡದಿಂದ ಸ್ಟಾರ್ ಆಟಗಾರ್ತಿ ಔಟ್

ಫೆಬ್ರವರಿ 15, 2025 - 11:59
 0  22
ಭರ್ಜರಿ ಗೆಲುವಿನ ಬೆನ್ನಲ್ಲೇ RCBಗೆ ಶಾಕ್: ತಂಡದಿಂದ ಸ್ಟಾರ್ ಆಟಗಾರ್ತಿ ಔಟ್

ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಯಾವುದೇ ತಂಡ 200 ರನ್​ಗಳನ್ನು ಚೇಸ್ ಮಾಡಿ ಗೆದ್ದಿರಲಿಲ್ಲ. ಆದರೆ ಈ ಬಾರಿಯ WPLನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇತಿಹಾಸ ನಿರ್ಮಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ಪಡೆ ಶುಭಾರಂಭ ಮಾಡಿದೆ.

ಇದರ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತವೊಂದು ಎದುರಾಗಿದೆ. ತಂಡದ ಸ್ಟಾರ್ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಗಾಯದಿಂದ ಬಳಲುತ್ತಿದ್ದು, ಹೀಗಾಗಿ ಅವರು ಈ ಬಾರಿಯ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯೆಯಾಗಿರುವ ಶ್ರೇಯಾಂಕಾ ಪಾಟೀಲ್ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಕ್ಕೆ ಕಾರಣ ಗಾಯದ ಸಮಸ್ಯೆ ಎಂದು ತಿಳಿದು ಬಂದಿದೆ. ಈ ಗಾಯದ ಸಮಸ್ಯೆಯ ಕಾರಣ ಅವರು ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಮೊಣಕಾಲಿನ ಗಾಯದ ಸಮಸ್ಯೆಯ ಕಾರಣ ಶ್ರೇಯಾಂಕಾ ಪಾಟೀಲ್ 2024ರ ಮಹಿಳಾ ಟಿ20 ವಿಶ್ವಕಪ್ ನಂತರ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ. ಅಲ್ಲದೆ ಆಸ್ಟ್ರೇಲಿಯಾ ಪ್ರವಾಸ ಹಾಗೂ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ವಿರುದ್ಧದ ಸರಣಿಗಳಿಂದಲೂ ಹೊರಗುಳಿದಿದ್ದರು. ಇದೀಗ ವುಮೆನ್ಸ್ ಪ್ರೀಮಿಯರ್ ಲೀಗ್ ಶುರುವಾದರೂ ಶ್ರೇಯಾಂಕಾ ಕಾಣಿಸಿಕೊಂಡಿಲ್ಲ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow