ಮಗನ ಸಾವಿನ ಸುದ್ದಿ ಕೇಳಿ ಪ್ರಾಣ ಬಿಟ್ಟ ತಾಯಿ! ಸಾವಿನಲ್ಲೂ ಒಂದಾದ ತಾಯಿ ಮಗ

ಡಿಸೆಂಬರ್ 23, 2024 - 16:11
 0  25
ಮಗನ ಸಾವಿನ ಸುದ್ದಿ ಕೇಳಿ ಪ್ರಾಣ ಬಿಟ್ಟ ತಾಯಿ! ಸಾವಿನಲ್ಲೂ ಒಂದಾದ ತಾಯಿ ಮಗ

ಮಂಡ್ಯ: ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಅಪಘಾತದಲ್ಲಿ ಸಾವನ್ನಿಪ್ಪದ್ದ ಮಗ ಕೃಷ್ಣಮೂರ್ತಿ (20). ಮಗನ ಸಾವು ತಿಳಿದು ಕುಸಿದು ಬಿದ್ದು ಸಾವನ್ನಪ್ಪಿದ ತಾಯಿ ಮಹದೇವಮ್ಮ (48) ಆಗಿದ್ದಾರೆ.

ನೆನ್ನೆ ಬೆಳಿಗ್ಗೆ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಮಗ ಕೃಷ್ಣಮೂರ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇತ್ತ ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಹೃದಯಾಘಾತದಿಂದ ತಾಯಿ ಮಹದೇವಮ್ಮ ಸಾವನಪ್ಪಿದ್ದಾರೆ. ಇದರೊಂದಿಗೆ ತಾಯಿ-ಮಗ ಇಬ್ಬರೂ ಸಾವಿನಲ್ಲೂ ಒಂದಾಗಿದ್ದಾರೆ. ತಾಯಿ-ಮಗನ ಸಾವಿನಿಂದ ಕುಟುಂಬ ಸದಸ್ಯರ ಆಕ್ರಂದನ‌ ಮುಗಿಲು ಮುಟ್ಟಿದೆ. ಇಬ್ಬರ ಅಂತ್ಯಕ್ರಿಯೆಯನ್ನು ಒಂದೇ ಸ್ಥಳದಲ್ಲಿ ನೆರವೇರಿಸಿದ್ದಾರೆ. ಇನ್ನು ಅಂತ್ಯಕ್ರಿಯೆಯಲ್ಲಿ ಭಾಗಿವಹಿಸಿದ ಕುಟುಂಬ ಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು ತಾಯಿ-ಮಗನ ಸಾವಿಗೆ ಕಂಬನಿ ಮಿಡಿದಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow