ಮಗಳ ಮೇಲೆಯೇ ಅತ್ಯಾಚಾರ ಎಸಗಿದ ತಂದೆ: ಮಗಳನ್ನೇ ಬ್ಲ್ಯಾಕ್ಮೇಲ್ ಮಾಡಿದ್ದ ಕಿರಾತಕ!

ಬೆಂಗಳೂರು ಗ್ರಾಮಾಂತರ: ತಂದೆ ಮತ್ತು ಮಗಳ ವಿಶೇಷ ಬಾಂಧವ್ಯಕ್ಕೆ ಯಾವುದೂ ಸರಿಸಾಟಿಯಾಗುವುದಿಲ್ಲ. ಆದ್ರೆ, ಇಲ್ಲೊರ್ವ ತಂದೆ ಸ್ವಂತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಪೈಶಾಚಿಕ ಕೃತ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.
19 ವರ್ಷ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಮಾಡಿದ್ದರ ಜತೆಗೆ ಆಕೆಗೆ ಬೆದರಿಕೆಯನ್ನೂ ಹಾಕಿದ್ದಾನೆ. ಸದ್ಯ ಹೊಸಕೋಟೆ ಮಹಿಳಾ ಠಾಣೆ ಪೊಲೀಸರು ಆರೋಪಿ ಮಂಜುನಾಥ್ನನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.
ಕಾರು ಚಾಲಕನಾಗಿರುವ ಮಂಜುನಾಥ್ಗೆ ಮೂರು ಜನ ಮಕ್ಕಳು. ಇಬ್ಬರು ಹೆಣ್ಣು, ಒಂದು ಗಂಡು ಮಗು. ಹಿರಿಯ ಮಗಳ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಹಾಗೂ ದೂರು ದಾಖಲಾಗಿದೆ. ತಂದೆಯ ಕಾಟ ತಾಳಲಾರದೆ ಯುವತಿ ಪಿಜಿಯಲ್ಲಿ ವಾಸ ಮಾಡುತ್ತಿದ್ದಳು ಎನ್ನಲಾಗಿದೆ. ವಿಷಯ ತಿಳಿಸಿದರೆ ಕೊಲೆ ಮಾಡುವ ಬೆದರಿಕೆಯನ್ನೂ ಹಾಕಲಾಗಿತ್ತು. ಹೀಗಾಗಿ ಜೀವ ಭಯದಿಂದ ಯುವತಿ ಮನೆಯಿಂದ ದೂರ ಉಳಿದಿದ್ದಳು. ತಂದೆಯಿಂದಾದ ಅನಾಚರಕ್ಕೆ ನ್ಯಾಯ ಒದಗಿಸುವಂತೆ ಯುವತಿ ಆಗ್ರಹಿಸಿದ್ದು, ಸದ್ಯ ಪೊಲೀಸರಿಂದ ತನಿಖೆ ನಡೆಯುತ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?






