ಮತ್ತೆ ಹರಿದ ನೆತ್ತರು: ಭೀಮಾತೀರದ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ!

ಫೆಬ್ರವರಿ 12, 2025 - 10:42
 0  43
ಮತ್ತೆ ಹರಿದ ನೆತ್ತರು: ಭೀಮಾತೀರದ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ!

ವಿಜಯಪುರ: ಭೀಮಾತೀರದಲ್ಲಿ ಮತ್ತೆ ರಕ್ತ ಹರಿದಿದೆ. ದುಷ್ಕರ್ಮಿಗಳು ಭೀಮಾತೀರದ ಹಂತಕ ಬಾಗಪ್ಪ ಹರಿಜನನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ರಾತ್ರಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ ಸೇರಿದಂತೆ ಸಿಕ್ಕ ಸಿಕ್ಕಲಿ ಹೊಡೆದು ಬಾಗಪ್ಪನನ್ನ ಕೊಲೆ ಮಾಡಲಾಗಿದೆ.

ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಸಲ ಹಂತಕರು ಬಾಗಪ್ಪನನ್ನು ಬಿಡಲಿಲ್ಲ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ಬಾಗಪ್ಪ ವಾಸ ಮಾಡುತ್ತಿದ್ದ.  ನಿನ್ನೆ ರಾತ್ರಿ 8.50ರ ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಏಕಾಏಕಿ ಮಚ್ಚಿನಿಂದ ದಾಳಿ ಮಾಡಿದ್ದಾರೆ. ಸಿಕ್ಕ ಸಿಕ್ಕಲ್ಲಿ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಬಾಗಪ್ಪ ಹರಿಜನ ಭೀಕರ ಕೊಲೆಯಾಗಿದ್ದು, ಘಟನಾ ಸ್ಥಳಕ್ಕೆ ವಿಜಯಪುರ SP ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow