ಮನಮೋಹನ್ ಸಿಂಗ್ ನಿಧನ: ನಾಳೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಅವರು, ಅಧಿಕೃತ ಮಾಹಿತಿಯನ್ನು ಇಂದು ತಿಳಿಸಲಾಗುವುದು ಎಂದಿದ್ದಾರೆ.
ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ನಡೆಯಲಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನ ಸೇರಿದಂತೆ ಏಳು ದಿನಗಳ ಕಾಲ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಸಿಂಗ್ ಅವರ ಪಾರ್ಥಿವ ಶರೀರ ಏಮ್ಸ್ ನಿಂದ ಗುರುವಾರ ತಡರಾತ್ರಿ ಅವರ ನಿವಾಸಕ್ಕೆ ತಲುಪಿದೆ. ಇಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ನಿಮ್ಮ ಪ್ರತಿಕ್ರಿಯೆ ಏನು?






