ಮಾನ ಮರ್ಯಾದೆ ಇದ್ದರೆ ಶೂದ್ರರು ದೇವಸ್ಥಾನಗಳಿಗೆ ಹೋಗಬಾರದು: ಕೆಎಸ್ ಭಗವಾನ್

ಮೈಸೂರು: ಹಿಂದೂ ಧರ್ಮ ಅಂದ್ರೆ ಅದು ಹಿಂದೂಗಳ ಧರ್ಮ ಅಲ್ಲ, ಬ್ರಾಹ್ಮಣರ ಧರ್ಮ. ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ ಎಂದು ಸಾಹಿತಿ ಪ್ರೊ.ಕೆ.ಎಸ್. ಭಗವಾನ್ ಮತ್ತೆ ನಾಲಗೆ ಹರಿಬಿಟ್ಟಿದ್ದಾರೆ. ಹೌದು ಮಹಿಷ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜ್ಞಾನದ ಹಸಿವು ಇಲ್ಲದ ಕಾರಣ ಹಲವರು ಗುಲಾಮರಾಗಿದ್ದಾರೆ. ಹಿಂದೂ ಧರ್ಮ ಅಂದ್ರೆ ಅದು ಹಿಂದೂಗಳ ಧರ್ಮ ಅಲ್ಲ.
ಹಿಂದೂ ಧರ್ಮ ಅಂದರೆ ಅದು ಬ್ರಾಹ್ಮಣರ ಧರ್ಮ. ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ. ಹಿಂದೂಗಳು ಮುಂದಕ್ಕೆ ಬಾರದ ಜನ ಹಾಗೂ ಬೇರೆಯವರನ್ನು ಮುಂದಕ್ಕೆ ಬಿಡುವುದಿಲ್ಲ. ಗಂಡಸರನ್ನು ಮಾತ್ರ ಬ್ರಾಹ್ಮಣರು ಅಂತಾರೆ. ಹೆಂಗಸರನ್ನಾ ಬ್ರಾಹ್ಮಣರು ಎನ್ನಲ್ಲಾ, ಅವರನ್ನು ಶೂದ್ರರು ಅಂತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ದೇವಸ್ಥಾನ ಕಟ್ಟೋದು ಶೂದ್ರರು. ದೇವಸ್ಥಾನದ ಒಳಗೆ ಇರೋರು ಬ್ರಾಹ್ಮಣರು. ದೇವಸ್ಥಾನ ಕಟ್ಟಿದ ಶೂದ್ರರನ್ನೇ ಬಿಟ್ಟುಕೊಳ್ಳಲ್ಲ. ನಾವು ಶೂದ್ರರಲ್ಲಾ ಎಂದು ಹೇಳಬೇಕು. ಶೂದ್ರರು ದೇವಸ್ಥಾನಗಳಿಗೆ ಹೋಗೋದನ್ನು ನಿಲ್ಲಸಬೇಕು. ನಾನು 50 ವರ್ಷ ಆಯ್ತು ದೇವಸ್ಥಾನಕ್ಕೆ ಹೋಗಿ. ದೇವಸ್ಥಾಕ್ಕೆ ಹೋದ್ರೆ ಏನು ಆಗಲ್ಲ. ತಟ್ಟೆಗೆ ದುಡ್ಡು ಹಾಕ್ತೀರಾ, ಅರ್ಧ ಕಾಯಿ ಇಟ್ಟುಕೊಂಡು ಅರ್ಧ ಕೊಡ್ತಾರೆ ಅಷ್ಟೇ. ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು. ನಾವು ಶೂದ್ರರು ಎಂದು ಒಪ್ಪಿಕೊಳ್ಳಬೇಕಾ ಎಂದು ಪ್ರಶ್ನಿಸಿದರು.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






