ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಕಡ್ಡಾಯ.!

ಸೆಪ್ಟೆಂಬರ್ 20, 2024 - 18:00
 0  24
ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಕಡ್ಡಾಯ.!

ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಸಮಿತಿಯನ್ನು ದೇವಸ್ಥಾನದ ಆಡಳಿತ ಸ್ಥಾಪಿಸಿದೆ.

ಇನ್ನೂ ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ಆರೋಪ ಚರ್ಚೆ ನಡುವೆ ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಆದೇಶ ಹೊರಡಿಸಲಾಗಿದೆ. ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.

ಹೌದು ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ. ಮುಜರಾಯಿ & ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿದೆ.

 ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow