ಮೂರು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ: ಯಾರಿಗೆ ಮುನ್ನಡೆ, ಯಾರಿಗೆ ಹಿನ್ನಡೆ? ಇಲ್ಲಿದೆ ಮಾಹಿತಿ

ಕರ್ನಾಟಕದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಮತ್ತು ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಮತದಾನ ನಡೆದಿದೆ. ಮಹಾರಾಷ್ಟ್ರ ಮತ್ತು ಜಾರ್ಖಾಂಡ್ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಮತದಾನ ಆಗಿದೆ. ಈ ಎಲ್ಲ ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಕರ್ನಾಟಕದಲ್ಲಿ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಜಿದ್ದಾಜಿದ್ದಿ ಕ್ಷೇತ್ರವಾಗಿವೆ. ಅದರಲ್ಲಂತೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಎನ್ಡಿಎ ಮೈತ್ರಿಕೂಟ ಮತ್ತು ಕಾಂಗ್ರೆಸ್ ಮಧ್ಯೆ ಪ್ರತಿಷ್ಠೆಯ ಕಣವಾಗಿದೆ.
ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ 1,001 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರಿಗೆ ಈವರೆಗೆ 20,128 ಮತಗಳು ಬಂದಿವೆ. ಸಂಡೂರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ 19,127 ಮತಗಳು ಬಂದಿವೆ.
ಶಿಗ್ಗಾಂವಿಯಲ್ಲಿ ನಾಲ್ಕನೇ ಸುತ್ತಿನಲ್ಲೂ ಭರತ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ಗಿಂತ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ 1219 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರು 600 ಮತಗಳ ಮುನ್ನಡೆ ಸಾಧಿಸಿದ್ದಾರೆ. ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಹಿನ್ನಡೆಯಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






